Orange Alert : ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : Orange Alert : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಲ್ಲೆಡೆ ಜಲಾವೃತವಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ದಿನವಿಡೀ ಮಳೆ ಆಗಲಿದ್ದು, ಸಮುದ್ರ ತೀರದ ಕಡೆಗೆ ಜೋರಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸ್ಥಳೀಯರು, ಪ್ರವಾಸಿಗರು ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜುಲೈ 15 ಹಾಗೂ 16 ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡುಗು ಜಿಲ್ಲೆಗಳು ಸೇರಿದಮತೆ ಒಟ್ಟು ಆರು ಜಿಲ್ಲೆಗಳಿಗದೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Yakshagana skill training : ಲಿಂಗತ್ವ ಅಲ್ಪ ಸಂಖ್ಯಾತರ ಗೌರವ ಬದುಕಿಗೆ ಯಕ್ಷಗಾನದ ಕೌಶಲ್ಯ ತರಬೇತಿ : ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ

ಇದನ್ನೂ ಓದಿ : Udupi DC Transfer : ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ವರ್ಗಾವಣೆ : ವಿದ್ಯಾ ಕುಮಾರಿ ನೂತನ ಡಿಸಿ

ಕಳೆದ 24 ಟೆಗಳಲ್ಲಿ ಉಡುಪಿಯ ಕೊಲ್ಲೂರಿನಲ್ಲಿ 18 ಸೆಂ.ಮೀ. ಮಳೆಯಾಗಿದ್ದು, ಅತಿ ಹೆಚ್ಚು ಮಳೆ ಸುರಿದಿರುತ್ತದೆ. ಸಿದ್ದಾಪುರದಲ್ಲಿ 17ಸೆಂ.ಮೀ, ಗೇರುಸೊಪ್ಪುದಲ್ಲಿ 13 ಸೆಂ.ಮೀ, ಮಂಕಿಯಲ್ಲಿ 12 ಸೆಂ.ಮೀ, ಕದ್ರಾ, ಕೋಟಾದಲ್ಲಿ 10 ಸೆಂ.ಮೀ ಪಣಂಬೂರುನಲ್ಲಿ 9 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Orange Alert: Heavy rain in coastal districts of the state today: Orange Alert announced

Comments are closed.