ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಾರದ ಪ್ರಾರಂಭದಲ್ಲಿ ಹಗಲಿನಲ್ಲಿ ಮೋಡ ಕವಿದಿದ್ದು, ರಾತ್ರಿ ವೇಳೆ ಜೋರಾದ ಗಾಳಿಯೊಂದಿಗೆ (Orange Alert) ಮಳೆಯಾಗುತ್ತಿತ್ತು. ಆದರೆ ನಿನ್ನೆಯಿಂದ ಬಿರುಗಾಳಿಯೊಂದಿಗೆ ದಿನವಿಡೀ ಉತ್ತಮ ಮಳೆಯಾಗಿರುತ್ತದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕ್ರಮವಾಗಿ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಮತ್ತೆ ಹೆಚ್ಚಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವುದರಿಂದ ಸ್ಥಳೀಯರಿಗೆ, ಪ್ರವಾಸಿಗರಿಗೆ ಹಾಗೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಕೂಡ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : Udupi News : ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ “ಆರೋಗ್ಯ ಶನಿವಾರ”
ಇದನ್ನೂ ಓದಿ : Heavy Rainfall in Karnataka : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ಜಿಲ್ಲೆಗೆ ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಿದ್ದು, 23 ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಐದು ದಿನಗಳು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Orange Alert: Orange alert announced today for the coastal districts of the state