Paddy buying centre: ಭತ್ತ ಖರೀದಿ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ

ಉಡುಪಿ: (Paddy buying centre) ಮುಂಗಾರು ಋತುವಿನ ಸಮಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಬೆಳೆದಿರುವ ಭತ್ತವನ್ನು ಖರೀದಿಸಲು ನವೆಂಬರ್‌ 21 ರಿಂದ ಭತ್ತ ಖರೀದಿಗೆ ನೊಂದಣಿ ಕೇಂದ್ರಗಳನ್ನು ತೆರೆದು ರೈತರ ನೊಂದಣಿಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಸೂಚನೆ ನೀಡಿದ್ದಾರೆ.

ಸ್ಥಳೀಯ ಪ್ರದೇಶಗಳಲ್ಲಿ ಬೆಳೆದ ಭತ್ತ(Paddy buying centre)ದ ತಳಿಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಷಾ, ಅಭಿಲಾಷ, ಮತ್ತು ಎಂಓ4 ತಳಿಯ ಭತ್ತಗಳಿಗೆ ಬೆಂಬಲ ಬೆಲೆ ಘೋಷಿಸಿದ್ದು, ಸಾಮಾನ್ಯ ಭತ್ತಕ್ಕೆ ರೂ.2540/- ದರವನ್ನು ನಿಗದಿಪಡಿಸಲಾಗಿದೆ. ರೈತರಿಗೆ ಅನುಕೂಲ ಆಗುವಂತೆ ಹತ್ತು ಕಡೆಗಳಲ್ಲಿ ನೊಂದಣಿ ಕೇಂದ್ರಗಳು ಹಾಗೂ ಏಳು ಕಡೆಗಳಲ್ಲಿ ಖರೀದಿ ಕೆಂದ್ರವನ್ನು ತೆರೆಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಬೆಡಿಕೆ ಇದ್ದಲ್ಲಿ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ನೊಂದಣಿ ಮತ್ತು ಖರೀದಿ ಕೇಂದ್ರಗಳನ್ನು ತೆರಯಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಖರೀದಿ ಕೆಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷೆ ಮಾಡಲು ಗ್ರೇಡರ್‌ ಗಳನ್ನು ಅಳವಡಿಸುವಂತೆ ಸೂಚಿಸಿದ್ದು, ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ಶೇಕರಿಸಿಡಲು ಅಗತ್ಯವಾದ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಈಗಾಗಲೇ ನೊಂದಣಿ ಮಾಡಿಕೊಂಡ ರೈತರು ತಾವು ಬೆಳೆದ ಭತ್ತವನ್ನು ಖರೀದಿ ಕೆಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದ್ದು, ಇದುವರೆಗೆ ನೊಂದಣಿ ಮಾಡಿಕೊಳ್ಳದ ರೈತರು ನೊಂದಣಿ ಮಾಡಿಕೊಂಡು ಮಾರಾಟ ಮಾಡಬಹುದು. ಮಾರಾಟ ಮಾಡುವ ಸಮಯದಲ್ಲಿ ರೈತರು ಆಧಾರ್‌ ಸಂಖ್ಯೆ ನೊಂದಣಿಯಾದ ಬ್ಯಾಂಕ್‌ ಖಾತೆಯ ವಿವರಗಳನ್ನು ನೀಡಬೇಕಾಗಿದ್ದು, ಭತ್ತ ಮಾರಾಟವಾದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುತ್ತದೆ.

ಇದನ್ನೂ ಓದಿ : Azan Controversy: ಮದರ್‌ ಥೆರೆಸಾ ಶಾಲೆಯಲ್ಲಿ ಮೊಳಗಿದ ಆಝಾನ್‌; ಹಿಂದೂಪರ ಸಂಘಟನೆಗಳಿಂದ ಆಕ್ರೋಶ

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೃಷಿ ಇಲಾಖೆ, ಎಪಿಎಂಸಿ ಅಧಿಕಾರಿಗಳು ಪರಸ್ಪರ ಸಮಾನವಾಗಿ ಕಾರ್ಯ ನಿರ್ವಹಿಸಿ ರೈತರಿಂದ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಮಾಡುವ ಕೆಲಸವನ್ನು ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ರೈತರಿಂದ ಖರೀದಿಸಿದ ಭತ್ತವನ್ನು ಜಿಲ್ಲೆಯ ಅಕ್ಕಿ ಗಿರಣಿಗಳಲ್ಲಿ ಕುಚಲಕ್ಕಿಯಾಗಿ ಪರಿವರ್ತಿಸಲು ಎಲ್ಲಾ ರೀತಿಯ ಅಗತ್ಯವಾದ ಸಹಕಾರಗಳನ್ನು ನೀಡುತ್ತೇವೆ ಎನ್ನುವುದಾಗಿ ಅಕ್ಕಿ ಗಿರಣಿಗಳ ಮಾಲಿಕರು ತಿಳಿಸಿದರು.

ಇದನ್ನೂ ಓದಿ : Young Artist Vignesh R.G: ಇಂಟರ್‌ ನ್ಯಾಷನಲ್‌ ಆರ್ಟ್ ಐಕಾನ್‌; ಟಾಪ್‌ 100 ವಿಜೇತ ಸ್ಪರ್ಧಿಗಳಲ್ಲಿ ಉಡುಪಿಯ ವಿಘ್ನೇಶ್‌

ಗ್ರಾಮಿಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದ್ದು, ರೈತ ನೊಂದಣಿ ಕೆಂದ್ರಗಳು ಮತ್ತು ಭತ್ತ ಖರೀದಿ ಕೇಂದ್ರಗಳ ಕುರಿತಾಗಿ ಮಾಹಿತಿಗಳನ್ನು ನೀಡುವುದಾಗಿ ಬೆಂಬಲ ಬೆಲೆಯಡಿ ಭತ್ತ ಖರೀದಿ ಕುರಿತಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Chithrapady Children Santhe : ಮಕ್ಕಳ ದಿನಾಚರಣೆ : ಚಿತ್ರಪಾಡಿ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ

ಈ ಕುರಿತಂತೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಭೆಯಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮೊಹಮ್ಮದ್‌ ಇಸಾಕ್‌ , ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ರಾಜ್ಯ ಆಹಾರ ಮತತು ನಾಗರೀಕ ಸರಬರಾಜು ನಿಗಮದ ಉಪಾಧ್ಯಕ್ಷರಾದ ಕಿರಣ್‌ ಕೊಡ್ಗಿ ಹಾಗೂ ನಿಗಮದ ಅಧಿಕಾರಿಗಳು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

(Paddy buying center) Under the minimum support price scheme during the monsoon season, District Collector Kurmarao M has instructed to open registration centers for the purchase of paddy from November 21 and start registration of farmers to buy paddy grown by the farmers of the district.

Comments are closed.