Permission for 9 beef shops : ಮಂಗಳೂರಲ್ಲಿ 9 ಗೋಮಾಂಸ ಮಾರಾಟ ಮಳಿಗೆಗೆ ಅನುಮತಿ : ಮನಪಾ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ

ಮಂಗಳೂರು : (Permission for 9 beef shops)ನಗರದ ಕೇಂದ್ರ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ತೆರೆಯಲು ಯೋಜನೆ ರೂಪಿಸಲಾಗಿದ್ದು , ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಫ್ ಸ್ಟಾಲ್ ತೆರೆಯಲು ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು ,
ಸ್ಮಾರ್ಟ್ ಸಿಟಿ ಯೋಜನೆಯಿಂದ ಸುಸಜ್ಜಿತವಾಗಿರುವ ಕೇಂದ್ರ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್‌ಗಳನ್ನು (ನವಾ ಸೆಂಟ್ರಲ್ ಮಾರ್ಕೆಟ್)(Permission for 9 beef shops) ತೆರೆಯಲು ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ : Separate Milk Union : ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ : ಬೇಡಿಕೆಯಿಟ್ಟ ಬಿಜೆಪಿ

114 ಕೋಟಿ ವೆಚ್ಚದಲ್ಲಿ ಹೊಸ ಸೆಂಟ್ರಲ್ ಮಾರುಕಟ್ಟೆ ನಿರ್ಮಿಸಲು ಯೋಜಿಸಲಾಗಿದ್ದು, ಹೊಸ ಸೆಂಟ್ರಲ್ ಮಾರುಕಟ್ಟೆಯ ಕೆಳ ಮಹಡಿಯಲ್ಲಿ 9 ಬೀಫ್ ಸ್ಟಾಲ್‌ಗಳನ್ನು ತೆರೆಯಲು ನೀಲಿ ನಕ್ಷೆ ಸಿದ್ಧವಾಗಿದೆ. ಪ್ರಸ್ತುತ ಸ್ಮಾರ್ಟ್ ಸಿಟಿ ಮಂಡಳಿಯ ಮುಂದಿರುವ ಮಾರುಕಟ್ಟೆಯ 3ಡಿ ನಕ್ಷೆಯಲ್ಲಿ, 9 ಬೀಫ್ ಸ್ಟಾಲ್‌ಗಳನ್ನು ಉಲ್ಲೇಖಿಸಿ ನಕ್ಷೆಯನ್ನು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ : ಕುಂದಾಪುರ : 24 ಗಂಟೆಯಲ್ಲಿ ಕಾಲೇಜು ವಿದ್ಯಾರ್ಥಿಯ ಅಪಹರಣ ಪ್ರಕರಣ ಬೇಧಿಸಿದ ಪೊಲೀಸರು

ಹೊಸ ಸೆಂಟ್ರಲ್ ಮಾರುಕಟ್ಟೆ ಕಟ್ಟಡವನ್ನು 18 ತಿಂಗಳಲ್ಲಿ ನಿರ್ಮಿಸಲಾಗುತ್ತಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಾಣದ ನಂತರ ಮಂಗಳೂರು ಮಹಾನಗರ ಪಾಲಿಕೆಯಿಂದ ಮಳಿಗೆಗಳನ್ನು ಮಂಜೂರು ಮಾಡಲಾಗಿತ್ತು. ಉದ್ದೇಶಿತ ಯೋಜನೆಯಲ್ಲಿ ದನದ ಮಾಂಸದಂಗಡಿಗೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತರಕಾರಿ, ಕೋಳಿ ಅಂಗಡಿಗಳ ಜತೆಗೆ ಬೀಫ್ ಸ್ಟಾಲ್ ಗೆ ಅನುಮತಿ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ವಿಧಾನಸಭಾ ಚುನಾವಣೆ 2023: ಬಂಟ್ವಾಳದಲ್ಲಿ ಬಿಜೆಪಿಯಿಂದ ರಾಜೇಶ್ ನಾಯಕ್ Vs ಕಾಂಗ್ರೆಸ್ ನಿಂದ ಪದ್ಮರಾಜ್, ಅಶ್ವಿನ್ ಕುಮಾರ್ ರೈ

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರವೂ ಬಿಜೆಪಿಯವರು ಕೆಂಡ ಮಂಡಲವಾಗಿ ಗೋಮಾಂಸದ ಅಂಗಡಿಗಳಿಗೆ ಅನುಮತಿ ನೀಡಿದ್ದಾರೆ. ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಮಂಡಳಿ ಈ ಯೋಜನೆಯನ್ನು ಕೂಡಲೇ ಕೈಬಿಡಬೇಕು. ಒಂದು ವೇಳೆ ಬಿಟ್ಟುಕೊಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ವಿಎಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ್ಯದ ಜಂಟಿ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಎಚ್ಚರಿಕೆ ನೀಡಿದ್ದಾರೆ.

(Permission for 9 beef shops) Plans have been made to open 9 beef stalls in the central market of the city, and against this background Vishwa Hindu Parishad has expressed outrage against the Mangalore Mahanagara Corporation.

Comments are closed.