ಅನುಮತಿ ಪಡೆಯದೆ ಚುನಾವಣಾ ಜಾಹೀರಾತು ಪ್ರಕಟಿಸುವಂತಿಲ್ಲ : ಉಡುಪಿ ಡಿಸಿ ಕೂರ್ಮರಾವ್ ಸೂಚನೆ

ಉಡುಪಿ : (Permission for election advertisement) ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್‌ ಟಿವಿ, ಫೇಸ್‌ ಬುಕ್‌, ವಾಟ್ಸಾಪ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸಲು ಅನುಮತಿಯನ್ನು ಪಡೆಯಬೇಕು. ಅನುಮತಿ ಇಲ್ಲದೇ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸಲು ಅನುಮತಿಯನ್ನು ಪಡೆಯಬೇಕು. ಅನುಮತಿ ಇಲ್ಲದೇ ಜಾಹಿರಾತುಗಳನ್ನು ಪ್ರಕಟಿಸಿದ್ದಲ್ಲಿ ಸಂಬಂಧಪಟ್ಟವರ ವಿರುದ್ದ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಇನ್ನೂ ಜಾಹಿರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ ಜಿಲ್ಲಾ ಎಂಸಿಎಂಸಿ ಸಮೀತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು ಎಂದಿದ್ದಾರೆ.

ಇದಲ್ಲದೇ ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದವರ ಹೆಸರು, ವಿಳಾಸ, ಪ್ರತಿಗಳ ಸಂಖ್ಯೆ ಸೇರಿದಂತೆ ಮತ್ತಿತರ ವಿಷಯಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು. ಮುದ್ರಿತ ಕುರಿತ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಮೂರು ದಿನಗಳ ಒಳಗಾಗಿ ಹಾಗೂ ಸಾಮಾಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಛೇರಿಗೆ ಒದಗಿಸಬೇಕು ಎಂದರು. ಉಲ್ಲಂಘನೆಯಾದಲ್ಲಿ ಪ್ರಜಾಪ್ರತಿನಿದಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಎಂಸಿಎಂಸಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ : Balebare Ghati Bandh: ಏಪ್ರಿಲ್ 15ರ ವರೆಗೆ ಬಾಳೆಬರೆ ಘಾಟಿ ಬಂದ್‌ : ತೀರ್ಥಹಳ್ಳಿ- ಕುಂದಾಪುರ ಸಂಚಾರ ರದ್ದು

ಇದನ್ನೂ ಓದಿ : ಬಜೆ ಡ್ಯಾಂನಲ್ಲಿ ಕಡಿಮೆಯಾದ ನೀರಿನ ಸಂಗ್ರಹ: ಪೌರಾಯುಕ್ತರಿಂದ ಮಹತ್ವದ ಮಾಹಿತಿ

ಇದನ್ನೂ ಓದಿ : ಉಡುಪಿ : ಪಾಳು ಬಿದ್ದ ಕನಕ ಮಹಲ್ ಕಟ್ಟಡದಲ್ಲಿ ಮೃತದೇಹ ಪತ್ತೆ

ಜಾಹಿರಾತು ಪ್ರಕಟಣೆ ಕುರಿತಂತೆ ಅನುಮತಿ ಪಡೆಯಲು ಈ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ
ಮೊದಲನೇ ಮಹಡಿ,
ರಜತಾದ್ರಿ, ಮಣಿಪಾಲ

Permission for election advertisement: Election advertisement cannot be published without permission: Udupi DC Koormarao notice

Comments are closed.