ಉಡುಪಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಸಂಪರ್ಕಕೊಂಡಿಯಂತಿರುವ ಆಗುಂಬೆ ಘಾಟ್ ರಸ್ತೆಯಲ್ಲಿ ಘನವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ಘಾಟ್ ರಸ್ತೆಯಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಆದ್ರೀಗ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ (Agumbe Ghat) ಜುಲೈ ತಿಂಗಳಿಂದ ಸೆಪ್ಟೆಂಬರ್ ಕಾಲ ಭಾರೀ ವಾಹನಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿತ್ತು.

ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿಯಿಂದ ಮಲ್ಪೆ ರಸ್ತೆಯ ಆಗುಂಬೆ ಘಾಟಿಯ 6,7 11 ನೇ ತಿರುವಿನಲ್ಲಿ ಮಳೆಯಿಂದಾಗಿ ತಡೆಗೋಡೆ ಕುಸಿತ ಆಗಿರುವುದರಿಂದ, ಈ ಹಿನ್ನೆಲೆ ಯಲ್ಲಿ ಈ ಹಿಂದೆ ಸೆಪ್ಟೆಂಬರ್ 15ರ ವರೆಗೆ ಲಘುವಾಹನಗಳ ಸಂಚಾರಕ್ಕೆ ಮಾತ್ರವೇ ಅನುಮತಿಯನ್ನು ನೀಡಲಾಗಿದ್ದು, ಭಾರೀ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿತ್ತು. ಆದ್ರೀಗ ಘಾಟಿ ರಸ್ತೆಯಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿಕೊಂಡಿದೆ.
ಇದನ್ನೂ ಓದಿ : ಉಡುಪಿ ಜಿಲ್ಲೆಯಾದ್ಯಂತ ಸೆಪ್ಟಂಬರ್ 5, 6 ರಂದು ವಿದ್ಯುತ್ ವ್ಯತ್ಯಯ
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳು ಸಂಚರಿಸಬಹುದಾಗಿರುವುದರಿಂದ ಸದರಿ ಘಾಟಿಯಲ್ಲಿ ಬಾರಿ ವಾಹನಗಳ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕಾರ್ಯಪಾಲಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ವಿಭಾಗ ಶಿವಮೊಗ್ಗ ಇವರು ಕೋರಿರುತ್ತಾರೆ ಹಾಗೂ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಇವರು ಆದೇಶ ಹೊರಡಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆದು ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ ಎಂದು ಆದೇಶ ಹೊರಡಿಸಿದೆ.
ಇದನ್ನೂ ಓದಿ : ಕಣ್ಮರೆಯಾಯ್ತು ಮಳೆ, ನೆತ್ತಿ ಸುಡುತ್ತಿದೆ ಸೂರ್ಯ : ಒಣಗುತ್ತಿರುವ ಭತ್ತದ ಬೆಳೆಗೆ ಇಲ್ಲಿದೆ ವಿಜ್ಞಾನಿಗಳ ವೈಜ್ಞಾನಿಕ ಸಲಹೆ
ಸಾರ್ವಜನಿಕರ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತೆ ಕಳೆದ ಜುಲೈ ತಿಂಗಳಿಂದ ಕಾಲ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ್ದಾರೆ. ಈ ಅವಧಿಯಲ್ಲಿ ಲಘು ವಾಹನ ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಿದ್ದಾರೆ. ವರ್ಷಂಪ್ರತಿ ಮಳೆಗಾಲದಲ್ಲಿ ಆಗುಂಬೆ ಘಾಟ್ ರಸ್ತೆಯನ್ನು ಹಲವು ತಿಂಗಳ ಕಾಲ ಬಂದ್ ಮಾಡಲಾಗುತ್ತಿದೆ. ಅದರಂತೆ ಈ ವರ್ಷವೂ ಮಾಡಲಾಗಿದ್ದು, ಇದೀಗ ಘನ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಆದೇಶ ಹೊರಡಿಸಿದೆ.
ಆಗುಂಬೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರುತ್ತಿದ್ದಂತೆಯೇ ಉಡುಪಿ ಜಿಲ್ಲಾಡಳಿತ ಉಡುಪಿ ಜಿಲ್ಲೆಯಿಂದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಪ್ರಯಾಣಿಸುವ ವಾಹನಗಳು ಕುಂದಾಪುರ, ಹೊಸಂಗಡಿ ಮಾರ್ಗ, ಭಟ್ಕಳ – ಜೋಗ- ಸಾಗರ ಶಿವಮೊಗ್ಗ ಮಾರ್ಗ, ಉಡುಪಿ – ಕಾರ್ಕಳ- ಎಸ್‌ಕೆ ಬಾರ್ಡರ್, ಶೃಂಗೇರಿ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿತ್ತು. ಉಳಿದ ವಾಹನಗಳು ಬೆಳ್ತಂಗಡಿ, ಉಜಿರೆ, ಚಾರ್ಮಾಡಿ ಘಾಟ್ ಮಾರ್ಗದಲ್ಲಿಯೂ ಸಂಚಾರ ನಡೆಸುತ್ತಿದ್ದವು. ಆದ್ರೀಗ ಆಗುಂಬೆ ಘಾಟ್ ರಸ್ತೆಯಲ್ಲಿ ಇನ್ಮುಂದೆ ಘನ ವಾಹನಗಳು ಸಂಚಾರ ನಡೆಸಲಿವೆ.
Permission for movement of Heavy vehicles on Agumbe Ghat Road Udupi DC Dr Vidhya Kumari Order