ಮಂಗಳೂರು : NIA attack in Mangalore : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದ ತನಿಖೆ ಮುಂದುವರಿದಿದೆ. ಈ ಪ್ರಕರಣ ಸಂಬಂಧ ಎಸ್.ಡಿ.ಪಿ.ಐ ರಾಷ್ಟ್ರೀಯ ನಾಯಕ ರಿಯಾಜ್ ಫರಂಗಿಪೇಟೆಯ ಮಂಗಳೂರಿನ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಯಾಜ್ ಹಾಗೂ ಆತನ ಪತ್ನಿಯ ಮೊಬೈಲ್ ಸೇರಿದಂತೆ ಕೆಲ ದಾಖಲೆಗಳನ್ನು ವಶಪಡಿಸಿಕೊಂಡು ಅಧಿಕಾರಿಗಳು ತೆರಳಿದ್ದಾರೆ.
ಹೌದು..ಪ್ರಧಾನಿ ನರೇಂದ್ರ ಮೋದಿ ಬಿಹಾರ ಭೇಟಿ ವೇಳೆ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಜುಲೈ 15ರಂದು ಇಬ್ಬರನ್ನು ಬಿಹಾರದ ಆ್ಯಂಟಿ ಟೆರರ್ ಸ್ಕ್ವಾಡ್ ಬಂಧಿಸಿತ್ತು. ಬಂಧಿತರಲ್ಲಿ ಮೊಹಮ್ಮದ್ ಜಲಾವುದ್ದೀನ್ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದರೆ, ಅಥೇರ್ ಪರ್ವೇಜ್ ಎಸ್.ಡಿ.ಪಿ.ಐ ಪಕ್ಷದ ನಾಯಕನಾಗಿದ್ದ. ಇದೀಗ ಈ ಪ್ರಕರಣ ಸಂಬಂಧ ಎನ್.ಐ.ಎ ಅಧಿಕಾರಿಗಳು ಮಂಗಳೂರಿನಲ್ಲಿಯೂ ದಾಳಿ ನಡೆಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿಯ ಪರ್ಲಿಯಾ ಎಂಬಲ್ಲಿರುವ ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ನಾಯಕ ರಿಯಾಜ್ ಫರಂಗಿಪೇಟೆ ಮನೆಗೆ ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ರೈಡ್ ಮಾಡಿದ ಅಧಿಕಾರಿಗಳು ರಿಯಾಜ್ ಸೇರಿದಂತೆ ಮನೆಯವರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಬಂಧಿತರ ಜೊತೆ ರಿಯಾಝ್ ಸಂಪರ್ಕ ಹೊಂದಿದ್ದ ಎಂದು ತನಿಖೆಯಲ್ಲಿ ಕಂಡು ಬಂದಿತ್ತು ಹೀಗಾಗಿ ಸಮಗ್ರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿಸಿದ ಬಳಿಕ ರಿಯಾಝ್ ಹಾಗೂ ಆತನ ಪತ್ನಿಯ ಮೊಬೈಲ್ ಸೇರಿದಂತೆ ದಾಖಲೆಗಳನ್ನು ವಶಪಡಿಸಿಕೊಂಡು ಎನ್.ಐ.ಎ ಅಧಿಕಾರಿಗಳು ತೆರಳಿದ್ದಾರೆ.
ರಿಯಾಝ್ ಫರಂಗಿಪೇಟೆ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿದ ಸುದ್ದಿ ತಿಳಿದು ಎಸ್.ಡಿ.ಪಿ.ಐ ಕಾರ್ಯಕರ್ತರು ರಿಯಾಝ್ ಮನೆ ಬಳಿ ಒಟ್ಟು ಸೇರಿದ್ದರು. ಗೋ ಬ್ಯಾಕ್ ಎನ್.ಐ.ಎ ಎಂಬ ಘೋಷಣೆ ಕೂಗಿದ್ದರು. ಈ ಸಂದರ್ಭ ಸ್ಥಳೀಯ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ನಡೆಸಿದ್ದರು. ಇತ್ತ ಎನ್.ಐ.ಎ ಅಧಿಕಾರಿಗಳು ತನಿಖೆ ಮುಗಿಸಿ ಹೊರಡುತ್ತಿದಂತೆ ರಿಯಾಝ್ ಫರಂಗಿಪೇಟೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಎನ್.ಐ.ಎ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ನನ್ನ ಮತ್ತು ನನ್ನ ಪತ್ನಿಯ ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಪ್ರಕರಣ ಸಂಬಂಧ ಅಧಿಕಾರಿಗಳು ಹಲವು ಪ್ರಶ್ನೆ ಕೇಳಿದ್ದಾರೆ. ಆದ್ರೆ ತನಿಖಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಭಾರತ ಇಸ್ಲಾಮೀಕರಣ ವಿಶನ್ 2047 ಎಂಬ ಬುಕ್ ಲೇಟ್ ಒಂದನ್ನು ಫೌಂಡೇಶನ್ ಒಂದು ಬಿಡುಗಡೆ ಮಾಡಿತ್ತು. ಉತ್ತರ ಪ್ರದೇಶದಲ್ಲಿ ಆದ ಬುಕ್ ಲೇಟ್ ನ ಒಂದು ಕಾಪಿಯನ್ನು ನಮ್ಮ ಜೊತೆ ಇಟ್ಟು ಈ ಪ್ರಕರಣದಲ್ಲಿ ಸೇರಿಸಲಾಗಿದೆ ಎಂಬ ಆರೋಪವನ್ನು ಮಾಡಿದರು.
ರಾಜ್ಯ ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎನ್.ಐ.ಎ ಟೀಂ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ 33 ಕಡೆ ದಾಳಿ ನಡೆಸಿ ಸಾಕ್ಷ್ಯ ಸಂಗ್ರಹದಲ್ಲಿ ತೊಡಗಿದೆ. ಇದೀಗ ಬಿಹಾರದಲ್ಲಿ ಪಿ.ಎಂ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿಯೂ ತನಿಖೆ ಮುಂದುವರಿಸಿದೆ.
ಇದನ್ನೂ ಓದಿ : Congress attack On Ministers : ಕಾಣೆಯಾಗಿದ್ದಾರೆ ಸಚಿವರು, ಬಿಜೆಪಿ ಕಾಲೆಳೆದ ‘ಕೈ’
Plot to assassinate Prime Minister Narendra Modi in Bihar: NIA attack in Mangalore