PM Modi to Udupi : ಉಡುಪಿಗೆ ಮೇ 4ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯತೆ

ಉಡುಪಿ : (PM Modi to Udupi) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈ ಮಧ್ಯೆ ಚುನಾವಣೆಯಲ್ಲಿ ಅತೀ ಕುತೂಹಲ ಕೆರಳಿಸಿರುವ ಕರಾವಳಿ ಕ್ಷೇತ್ರಗಳಿಗೆ ಇದೀಗ ಪ್ರಧಾನಿ ಮೋದಿ ಅವರು ಭೇಟಿ ನೀಡಿ ಪ್ರಚಾರ ನಡೆಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಚುನಾವಣೆ ಬೆನ್ನಲ್ಲೇ ಕೇಂದ್ರ ನಾಯಕರುಗಳು ರಾಜ್ಯಕ್ಕೆ ಮೇಲಿಂದ ಮೇಲೆ ಪ್ರವಾಸ ಕೈಗೊಳ್ಳುತ್ತಿದ್ದು, ರ್ಯಾಲಿ, ಸಾರ್ವಜನಿಕ ಸಭೆ, ರೋಡ್‌ ಶೋ ಇನ್ನಿತರ ಕಾರ್ಯಕ್ರಮಗಳ ಮೂಲಕ ಚುನಾವಣಾ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗಮಿಸಿದ್ದು, ಪ್ರಚಾರ ಕಾರ್ಯ ನಡೆಯುತ್ತಿದೆ. ಚುನಾವಣಾ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯಕ್ಕೆ ಎಂಟು ಬಾರಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದು, ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಮೇ 4 ರಂದು ಉಡುಪಿ ಜಿಲ್ಲಾ ಕೇಂದ್ರ ಅಥವಾ ಸೂಕ್ತ ಪ್ರದೇಶದಲ್ಲಿ ಬಿಜೆಪಿ ಸಮಾವೇಶ ನಡೆಯುವ ಸಾಧ್ಯತೆಯಿದ್ದು, ಪ್ರಧಾನಿ ಮೋದಿ ಜಿಲ್ಲೆಗೆ ಭೇಟಿ ನೀಡುವ ಬಗ್ಗೆ ಕೇಂದ್ರ ನಾಯಕರು ಜಿಲ್ಲಾ ಪ್ರಮುಖರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನುಕೂಲವಾಗುವಂತೆ ಸೂಕ್ತ ಪ್ರದೇಶದಲ್ಲಿ ಸಮಾವೇಶ ನಡೆಯಲಿದ್ದು, ಯೋಗಿ ಆದಿತ್ಯನಾಥ್‌ ಕೂಡ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : Rahul gandhi mega rally : ಬಾಲ್ಕಿ – ಹುಮ್ನಾಬಾದ್ ನಲ್ಲಿ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಮೆಗಾ ರ‍್ಯಾಲಿ

ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಚುನಾವಣೆ ದೃಷ್ಟಿಯಲ್ಲಿ ಜನರನ್ನು ಮೋದಿ ಮೋಡಿ ಮಾಡಲಿದ್ದಾರೆ. ಚುನಾವಣೆ ದಿನಾಂಕ ಪ್ರಕಟವಾದ ನಂತರದಲ್ಲಿ ಮೋದಿ ಅವರು ಮೊದಲ ಬಾರಿಗೆ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯಕ್ಕೆ ಭೇಟಿ ನೀಡಿ ಸಫಾರಿ ನಡೆಸಿದ್ದರು. ಇದೀಗ ಚುನಾವಣಾ ದಿನಾಂಕ ಘೋಷಣೆಯಾದ ನಂತರದಲ್ಲಿ ರಾಜ್ಯಕ್ಕೆ ಮೋದಿ ಅವರ ಎರಡನೇ ಭೇಟಿ ಇದಾಗಲಿದೆ.

PM Modi to Udupi: Prime Minister Narendra Modi is likely to visit Udupi on May 4

Comments are closed.