ಮಂಗಳೂರು : ಮೇ 3ರಂದು ಕಡಲೂರಿಗೆ ನಮೋ ಮೋದಿ ಭೇಟಿ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ (PM Modi’s election campaign) ಪ್ರಚಾರದ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಒಟ್ಟು 6 ದಿನಗಳ ಕಾಲ ಪ್ರಚಾರ ನಡೆಸಲಿದ್ದು, 21 ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲೆಂದು ಕೇಂದ್ರದಿಂದ ಸಕಲ ಸಿದ್ಧತೆ ನಡೆಸಿದ್ದಾರೆ.‌ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ 180 ಕ್ಷೇತ್ರಗಳಲ್ಲಿ 6 ದಿನಗಳ ಪ್ರಚಾರವನ್ನೂ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಪ್ರಧಾನಿ ಮೋದಿ ಕಚೇರಿಗೆ ಪ್ಲಾನ್ ಮಾಡಿದೆ ಎನ್ನಲಾಗಿದೆ. ಸದ್ಯಕ್ಕೆ ಮಂಗಳೂರಿಗೆ ಮೇ 3ರಂದು ನಮೋ ಮೋದಿ ಬರಲಿದ್ದಾರೆ ಎಂದು ಸುದ್ದಿಯಾಗಿದೆ.

ಈ ಹಿಂದೆಯಷ್ಟೇ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಎಪ್ರಿಲ್‌ 29ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿತ್ತು. ಆ ದಿನದಂದು ಸಂಜೆ 4 ಕ್ಕೆ ಕೊಟ್ಟಾರದಿಂದ ನಾರಾಯಣಗುರು ವೃತ್ತದವರೆಗೆ ರೋಡ್‌ ಶೋ ನಡೆಸುವುದಾಗಿ, ಬಳಿಕ ಚುನಾವಣಾ ಪ್ರಚಾರ ಸಭೆಯಲ್ಲೂ ಮಾತನಾಡುವರು ಎಂದು ಹೇಳಲಾಗಿತ್ತು.

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಚುನಾವಣೆ : ನುಡಿದಂತೆ ನಡೆದ ಸ್ಯಾಂಡಲ್‌ವುಡ್‌ ಬಾದ್‌ ಷಾ ಕಿಚ್ಚ ಸುದೀಪ್

ಸದ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವುದರಿಂದ, ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಎಪ್ರಿಲ್ 27 ರಂದು ಮಂಗಳೂರಿಗೆ ನಿಗದಿಯಾಗಿದ್ದ ಅಮಿತ್‌ ಶಾ ಭೇಟಿ ರದ್ದಾಗಿದೆ. ಕಾಪುವಿನ ಭೇಟಿ ದಿನಾಂಕ ನಿಗದಿಯಾಗಿಲ್ಲ ಎಂದು ಸಹ ಹೇಳಿದ್ದಾರೆ.

ಕರ್ನಾಟಕ ಚುನಾವಣೆ ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್ : 6 ದಿನಗಳು, 21 ರ್ಯಾಲಿ, 180 ಕ್ಷೇತ್ರಗಳಲ್ಲಿ ಪ್ರಚಾರ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಮಾಸ್ಟರ್ ಪ್ಲಾನ್ (PM Modi master Plan) ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಒಟ್ಟು 6 ದಿನಗಳ ಕಾಲ ಪ್ರಚಾರ ನಡೆಸಲಿದ್ದು, 21 ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲೆಂದು ಕೇಂದ್ರದಿಂದ ಸಕಲ ಸಿದ್ಧತೆ ನಡೆಸಿದ್ದಾರೆ.

180 ಕ್ಷೇತ್ರಗಳಲ್ಲಿ 6 ದಿನಗಳ ಪ್ರಚಾರವನ್ನೂ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಪ್ರಧಾನಿ ಮೋದಿ ಕಚೇರಿಗೆ ಪ್ಲಾನ್ ಮಾಡಿದೆ ಎನ್ನಲಾಗಿದೆ. ಈಗಾಗಲೇ ಮೈಸೂರು ಮತ್ತು ಬೆಂಗಳೂರು ರೋಡ್ ಶೋ ದಿನಾಂಕ ಮುಗಿದ ನಂತರ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಯಾವ ರೀತಿ ಪ್ರಚಾರ ಮಾಡಬೇಕು ಎಂಬುದಕ್ಕೆ ಪ್ಲಾನ್ ರೆಡಿ ಮಾಡಲಾಗಿದೆ ಎನ್ನಲಾಗಿದೆ. ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಒಟ್ಟು 6 ದಿನಗಳ ಕಾಲ 21 ಚುನಾವಣಾ ರ್ಯಾಲಿಗಳನ್ನು ನಡೆಸಿ ಪ್ರಚಾರ ನಡೆಸಲಿದ್ದಾರೆ. ಪ್ರತಿ ಭೇಟಿ ವೇಳೆ ತಲಾ 2 ದಿನ ಪ್ರಚಾರ ನಡೆಸುವ ಯೋಜನೆ ರೂಪಿಸಲಾಗಿದೆ. 180 ಕ್ಷೇತ್ರಗಳಲ್ಲಿ 6 ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು, ಮೈಸೂರು ರೋಡ್ ಶೋಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಇದಾದ ಬಳಿಕ ಕೋಲಾರ, ಚೆನ್ನಪಟ್ಟಣ, ಬೇಲೂರು, ಚಿತ್ರದುರ್ಗ, ಕುಡುಚಿ, ಶಿವಮೊಗ್ಗ, ಹೊಸಪೇಟೆ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಪ್ರಧಾನಿ ರ್ಯಾಲಿ ನಡೆಸಲು ಬಿಜೆಪಿ 15ಕ್ಕೂ ಹೆಚ್ಚು ಸ್ಥಳಗಳ ಪಟ್ಟಿಯನ್ನು ಕಳುಹಿಸಿದೆ. ವಿಜಯಪುರ, ಸಿಂಧನೂರು ಮತ್ತು ಹಾವೇರಿ. ಈ ಮೂಲಕ ಕರ್ನಾಟಕದಲ್ಲಿ ಮೋದಿ ಮೇನಿಯಾ ವ್ಯಾಪಿಸಿ ಬಿಜೆಪಿ ಗೆಲುವಿಗೆ ರಣತಂತ್ರ ರೂಪಿಸಲಿದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಂದ ನಂತರ ರಾಜ್ಯ ಸಂಪೂರ್ಣ ಬಿಜೆಪಿ ನೇತೃತ್ವದ ರಾಜ್ಯವಾಗುವುದರಲ್ಲಿ ಸಂಶಯವಿಲ್ಲ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಲೆ ಜೋರಾಗಿದೆ ಎಂಬುದಕ್ಕೆ ಜನರ ಉತ್ಸಾಹವೇ ಸಾಕ್ಷಿ ಎಂದರು. ಚುನಾವಣೆಗೆ ಸಂಬಂಧಿಸಿದಂತೆ ಅಮಿತ್ ಶಾ ಕೆಲವು ಸಲಹೆಗಳನ್ನು ನೀಡಿದ್ದಾರೆ. ಇಂದು ರಾತ್ರಿ ಪ್ರಧಾನಿ ನಡೆಸಿದ ಕೆಲವು ಕಾರ್ಯಕ್ರಮಗಳನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಹೇಳಿದರು.

PM Modi’s election campaign : Namo Modi will visit Mangalore on May 3

Comments are closed.