ಬೆಳ್ತಂಗಡಿ ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸರ ದಾಳಿ

ಬೆಳ್ತಂಗಡಿ : Lodge Raid Ujire : ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಮಾಹಿತಿಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ ಪಿ ಅವರ ನಿರ್ದೇಶನದ ಮೇರೆಗೆ ವಿಶೇಷ ಪೊಲೀಸರ ತಂಡ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಐದು ವಾಹನಗಳಲ್ಲಿ ಬಂದಿದ್ದ 20 ಅಧಿಕ ಅಧಿಕಾರಿಗಳ ತಂಡ ಲಾಡ್ಜ್ ಗಳಲ್ಲಿ ಪರಿಶೀಲನೆ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸುತ್ತಮುತ್ತಲಿನ ಲಾಡ್ಜ್ ಗಳಲ್ಲಿ ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿಯ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದ ಪೊಲೀಸರ ತಂಡ ಈ ದಾಳಿಯನ್ನು ನಡೆಸಿದೆ. ರಾತ್ರಿ 10ಗಂಟೆ ಸುಮಾರಿಗೆ ಲಾಡ್ಜ್ ಗಳ ಮೇಲೆ ದಾಳಿ ನಡೆಸಲಾಗಿದೆ. ಉಜಿರೆಯಲ್ಲಿನ ಎಲ್ಲಾ ಲಾಡ್ಜ್ ಗಳ ಮೇಲೆಯೂ ದಾಳಿ ನಡೆಸಲಾಗಿದ್ದು, ರಿಜಿಸ್ಟ್ರರ್ ಬುಕ್, ಗ್ರಾಹಕರ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಆದರೆ ಈ ಲಾಡ್ಜ್ ಗಳಲ್ಲಿ ಯಾವುದೇ ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳು ನಡೆದಿರುವುದು ಕಂಡು ಬಂದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು 20 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಲಾಡ್ಜ್ ಗಳಲ್ಲಿ ಉಳಿದು ಕೊಳ್ಳುವ ಪ್ರವಾಸಿಗರು ಹಾಗೂ ಭಕ್ತರ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡ ನಂತರವೇ ರೂಂ ನೀಡಬೇಕು. ಅನೈತಿಕ ಹಾಗೂ ಕಾನೂನು ಬಾಹಿರ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಪೊಲೀಸರು ಲಾಡ್ಜ್ ಮಾಲೀಕರಿಗೆ ಸೂಚನೆಯನ್ನು ನೀಡಿದ್ದಾರೆ. ಉಜಿರೆ ಸುತ್ತಮುತ್ತಲಿನ ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಅನ್ನೋ ಮಾಹಿತಿಯ ಹಿನ್ನೆಲೆಯಲ್ಲಿ ಈ ದಾಳಿಯನ್ನು ನಡೆಸಲಾಗಿತ್ತು.

ಇದನ್ನೂ ಓದಿ :  16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ: ಕೇರಳದ ತೃತಿಯಲಿಂಗಿ ಮಹಿಳೆಗೆ 7 ವರ್ಷ ಜೈಲು

ಇದನ್ನೂ ಓದಿ : Students sick-food poisoning: ಮಂಗಳೂರು: ವಿಷಾಹಾರ ಸೇವನೆ 100ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

Police raid on Lodge in Ujire Dakshina Kannada

Comments are closed.