ಉಡುಪಿಗೆ ಪ್ರಸಾದ್‌ ಕಾಂಚನ್‌ ಕಾಂಗ್ರೆಸ್‌ ಅಭ್ಯರ್ಥಿ

ಉಡುಪಿ : (Prasad Kanchan for Udupi) ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕರಾವಳಿಯಲ್ಲಿ ಕಾಂಗ್ರೆಸ್‌ ಪಕ್ಷ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದೆ. ಉಡುಪಿ ವಿಧಾಸನಭಾ ಕ್ಷೇತ್ರಕ್ಕೆ ಇಂದು ಪ್ರಸಾದ್‌ ಕಾಂಚನ್‌ ಅವರನ್ನು ಕಣಕ್ಕೆ ಇಳಿಸಿದೆ. ನಿರೀಕ್ಷೆಯಂತೆಯೇ ಈ ಬಾರಿ ಉಡುಪಿ ಕ್ಷೇತ್ರದಿಂದ ಮೊಗವೀರ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ.

ಕಾಂಗ್ರೆಸ್‌ ಪಕ್ಷ ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಅಳೆದು ತೂಗಿ ಇಂದು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಎರಡನೇ ಹಂತದಲ್ಲಿ ಒಟ್ಟು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಲಾಗಿದೆ. ಉಳಿದಂತೆ ಬಿಜೆಪಿ ಟಿಕೆಟ್‌ ಪ್ರಕಟಗೊಂಡ ನಂತರ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಕೊನೆಗೂ ಎರಡನೇ ಹಂತದಲ್ಲಿ ಕಾಂಗ್ರೆಸ್‌ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದ್ದು, ಉಡುಪಿ ಕ್ಷೇತ್ರಕ್ಕೆ ಪ್ರಸಾದ್‌ ಕಾಂಚನ್‌ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ.‌

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಬೈಂದೂರು ಕ್ಷೇತ್ರಕ್ಕೆ ಕೆ.ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರಕ್ಕೆ ಮೊಳಹಳ್ಳಿ ದಿನೇಶ್‌ ಹೆಗ್ಡೆ, ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್‌ ಸೊರಕೆ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಉಡುಪಿ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿರಲಿಲ್ಲ. ಅದ್ರಲ್ಲೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಾರೀ ಪೈಪೋಟಿ ಏರ್ಪಟ್ಟಿತ್ತು. ಇದೀಗ ಮೊಗವೀರ ಸಮುದಾಯದ ಪ್ರಸಾದ್‌ ಕಾಂಚನ್‌ ಅವರನ್ನು ಕಾಂಗ್ರೆಸ್‌ ಕಣಕ್ಕೆ ಇಳಿಸಿದೆ.

ಇದನ್ನೂ ಓದಿ : Congress Candidate List : ಕಾಂಗ್ರೆಸ್‌ ಪಕ್ಷದ 42 ಅಭ್ಯರ್ಥಿಗಳ ಎರಡನೇ ಹಂತದ ಪಟ್ಟಿ ರಿಲೀಸ್‌

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ರಕ್ಷಿತ್‌ ಶಿವರಾಮ್‌, ಮೂಡಬಿದ್ರೆಯಿಂದ ಮಿಥುನ್‌ ರೈ, ಬಂಟ್ವಾಳದಿಂದ ಬಿ.ರಮಾನಾಥ ರೈ, ಸುಳ್ಯದಿಂದ ಕೃಷ್ಣಪ್ಪ, ಮಂಗಳೂರು ಕ್ಷೇತ್ರದಿಂದ ಯು.ಟಿ.ಖಾದರ್‌ ಅವರ ಕಣಕ್ಕೆ ಇಳಿಸಿದ್ದು, ಮಂಗಳೂರು ಉತ್ತರ ಹಾಗೂ ದಕ್ಷಿಣ ಕ್ಷೇತ್ರದಿಂದ ಇದುವರೆಗೂ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಎರಡನೇ ಪಟ್ಟಿಯಲ್ಲಾದ್ರೂ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಫೈನಲ್‌ ಮಾಡುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ನಿರಾಸೆಯಾಗಿದೆ. ಎರಡೂ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿಗಳ ನಡುವೆ ಬಾರೀ ಪೈಪೋಟಿ ಏರ್ಪಟ್ಟಿದೆ.

Prasad Kanchan for Udupi: Prasad Kanchan is the Congress candidate for Udupi

Comments are closed.