Prasad Raj Kanchan Nomination : ಉಡುಪಿ : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ನಾಮಪತ್ರ ಸಲ್ಲಿಕೆ

ಉಡುಪಿ : (Prasad Raj Kanchan Nomination) ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಇನ್ನೂ ಮೂರು ದಿನಗಳು ಬಾಕಿ ಇವೆ. ಹೀಗಾಗಿ ಪಕ್ಷದ ಚುನಾವಣಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಉಡುಪಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್ ಕಾಂಚನ್‌ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಕಾಪು ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಸಾದ್ ರಾಜ್ ಕಾಂಚನ್, ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಕೊಡುಗೆಯಿಂದ ಉಡುಪಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ. ವಿ.ಎಸ್ ಆಚಾರ್ಯ ಅವರು ದೈವಾಧೀನರಾದ ನಂತರ ಬಿಜೆಪಿ ಧೂಳಿಪಟವಾಗಿದೆ. ಕಾರ್ಯಕರ್ತರ ಕಷ್ಟ ಸುಖದಲ್ಲಿ ನಿರಂತರವಾಗಿ ನಿಮ್ಮ ಜತೆಗೆ ಇರುತ್ತೇನೆ ಎಂದರು.

ಪ್ರಸಾದ್‌ರಾಜ್‌ ಕಾಂಚನ್‌ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ನಾಯಕಿ ಸರಳಾ ಕಾಂಚನ್‌ ಪುತ್ರನಾಗಿದ್ದು ಉಡುಪಿ, ಮಂಗಳೂರು, ಕಾರವಾರದಲ್ಲಿ ಕಾಂಚನಾ ಹುಂಡೈ ಶೋರೂಮ್‌ ಹೊಂದಿದ್ದಾರೆ. 1999 ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಬ್ರಹ್ಮಾವರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಸರಳಾ ಕಾಂಚನ್‌ ಪಕ್ಷೇತರ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ವಿರುದ್ದ 4,763 ಮತಗಳಿಂದ ಸೋಲನುಭವಿಸಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಅವರು ಪ್ರಭಾವಿ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ತಾಯಿಯ ರಾಜಕೀಯ ಗರಡಿಯಲ್ಲಿ ಪಳಗಿರುವ ಪ್ರಸಾದ್‌ ರಾಜ್‌ ಕಾಂಚನ್‌ ಮೊದಲ ಬಾರಿಗೆ ಉಡುಪಿ ವಿಧಾನಸಭಾ ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇದನ್ನೂ ಓದಿ : Rahul gandhi mega rally : ಬಾಲ್ಕಿ – ಹುಮ್ನಾಬಾದ್ ನಲ್ಲಿ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಮೆಗಾ ರ‍್ಯಾಲಿ

ಇನ್ನೂ ಪ್ರಸಾದ್‌ ರಾಜ್‌ ಕಾಂಚನ್‌ ಕರಾವಳಿಯ ಪ್ರಬಲ ಮೊಗವೀರ ಸಮುದಾಯಕ್ಕೆ ಸೇರಿದವರು. ಜೊತೆಗೆ ರಾಜಕೀಯ ಹಿನ್ನಲೆಯುಳ್ಳ ಕುಟುಂಬಕ್ಕೂ ಸೇರಿದವರು. ಇದಲ್ಲದೇ ಪ್ರಸಾದ್ ರಾಜ್‌ ಕಾಂಚನ್‌ ಉದ್ಯಮಿಯಾಗಿದ್ದು, ಉಡುಪಿ ಸೇರಿದಂತೆ ಹಲವು ಕಡೆಗಳಲ್ಲಿ ಹುಂಡೈ ಡೀಲರ್‌ ಶಿಪ್‌ ಹೊಂದಿದ್ದಾರೆ. ಜಾತಿಯ ಜೊತೆಗೆ ಹಣದ ಬಲವೂ ಪ್ರಮುಖ ಪಾತ್ರವಹಿಸುವ ಕಾರಣ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಅಳೆದು ತೂಗಿ ಕಾಂಗ್ರೆಸ್‌ ಪ್ರಸಾದ್‌ ಕಾಂಚನ್‌ ಅವರನ್ನು ಕಣಕ್ಕಿಳಿಸಿದೆ.

Prasad Raj Kanchan Nomination: Udupi: Congress candidate Prasad Raj Kanchan has submitted his nomination paper.

Comments are closed.