Praveen Nettaru murder case: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್‌ ಎನ್‌ಐಎ ವಶಕ್ಕೆ

ಮಂಗಳೂರು: (Praveen Nettaru murder case) ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್‌ ಐಎ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್‌ ಅನ್ನು ವಶಕ್ಕೆ ಪಡೆದುಕೊಂಡಿದೆ. ಉಗ್ರ ಕೃತ್ಯಗಳಿಗೆ ಈ ಹಾಲ್‌ ಅನ್ನು ಬಳಸಿಕೊಂಡು ಭಯೋತ್ಪಾದಕ ತರಬೇತಿ ನೀಡಲು ಹಾಲ್‌ ಅನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಜುಲೈ 27 ರಂದು ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ದಾಳ ಹಲವರನ್ನು ಬಂಧಿಸಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತರಬೇತಿ ನೀಡಲು ಬಳಸುತ್ತಿದ್ದ ಬಂಟ್ವಾಳ ತಾಲೂಕಿನ ಇಡುಕ್ಕಿ ಗ್ರಾಮದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್‌ ಅನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ. ಇದು ಉಗ್ರ ಚಟುವಟಿಕೆಯ ಕೇಂದ್ರ ಬಿಂದುವಾಗಿದೆ ಎಂದು ಎನ್‌ಐಎ ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖಿಸಿದೆ.

ಈ ಕಮ್ಯುನಿಟಿ ಹಾಲ್‌ ಫ್ರೀಡಂ ಎಜುಕೇಶನಲ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ ಹೆಸರಿನಲ್ಲಿದ್ದು, ಪ್ರವೀಣ್‌ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಹಂತಕರಿಗೂ ಇಲ್ಲಿ ತರಬೇತಿ ನೀಡಲಾಗಿತ್ತು ಎಂದು ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಈ ಆದೇಶದ ಪ್ರತಿಯನ್ನು ಹಾಲ್‌ ನ ಮಾಲೀಕರು, ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಎನ್‌ಐಎ ನ ಅಧಿಕೃತ ಮೂಲಗಳು ತಿಳಿಸಿವೆ. ಈ ಮಧ್ಯೆ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂ ಬಹುಮಾನ ನೀಡುವುದಾಗಿ ಕಳೆದ ತಿಂಗಳು ಎನ್‌ ಐಎ ಘೋಷಿಸಿತ್ತು.

ಇದನ್ನೂ ಓದಿ : Attempt to suicide: ಹಿರಿಯ ವಿದ್ಯಾರ್ಥಿಗಳಿಂದ ಕಿರುಕುಳ: ಬೇಸತ್ತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಇದನ್ನೂ ಓದಿ : Student raped by Friends: ನರ್ಸಿಂಗ್‌ ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸ್ನೇಹಿತರಿಂದಲೇ ಅತ್ಯಾಚಾರ: ಅರೋಪಿಗಳು ಅರೆಸ್ಟ್‌

ಇದನ್ನೂ ಓದಿ : Women murder: ಮಹಿಳೆಯ ಕೊಲೆಗೈದು ಫೇಸ್ ಬುಕ್ ಲೈವ್ ಬಂದ ಪಾಗಲ್ ಪ್ರೇಮಿ

Praveen Nettaru murder case: Mittur Freedom Community Hall in NIA custody

Comments are closed.