Protest against NIA: ಮಂಗಳೂರಿನಲ್ಲಿ ಎನ್​ಐಎ ವಿರುದ್ಧ ಪ್ರತಿಭಟನೆ : 60 ಪಿಎಫ್​ಐ ಕಾರ್ಯಕರ್ತರು ವಶಕ್ಕೆ

ಮಂಗಳೂರು : Protest against NIA : ಹಿಂದೂ ಮುಖಂಡ ಹಾಗೂ ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ ಇಂದು ಬೆಳ್ಳಂಬೆಳಗ್ಗೆ ಪಿಎಫ್​ಐ ಹಾಗೂ ಎಸ್​ಡಿಪಿಐ ಕಾರ್ಯಕರ್ತರಿಗೆ ಶಾಕ್​​ ನೀಡಿದೆ. ನಸುಕಿನ ಜಾವ 3:30ರ ಸುಮಾರಿಗೆ ಪಿಎಫ್​ಐ ಹಾಗೂ ಎಸ್​ಡಿಪಿಐ ಸಂಘಟನೆ ಮುಖಂಡರ ನಿವಾಸದ ಮೇಲೆ ದೇಶಾದ್ಯಂತ ದಾಳಿ ನಡೆದಿದೆ. ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳ ಮೇಲೆ ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ದಾಳಿ ನಡೆದಿದೆ.


ಇನ್ನು ಮಂಗಳೂರಿನಲ್ಲಿ ಎನ್​ಐಎ ಅಧಿಕಾರಿಗಳು ಪಿಎಫ್​ಐ ಹಾಗೂ ಎಸ್​ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿ ಮಂಗಳೂರು ನಗರದಲ್ಲಿ ಉಭಯ ಸಂಘಟನೆಗಳ ಕಾರ್ಯಕರ್ತರು ಎನ್​ಐಎ ಗೋ ಬ್ಯಾಕ್​ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಜೋಕಟ್ಟೆ ಹಾಗೂ ಕಾವೂರು ಬಳಿಯಲ್ಲಿ ಸುಮಾರು 60ಕ್ಕೂ ಅಧಿಕ ಪಿಎಫ್ಐ ಮತ್ತು ಎಸ್​ಡಿಪಿಐ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇನ್ನು ಈ ವಿಚಾರವಾಗಿ ಮಾತನಾಡಿದ ಪೊಲೀಸ್​ ಆಯುಕ್ತ ಶಶಿಕುಮಾರ್​, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ನಡೆಯುತ್ತಿರುವ ಎನ್​ಐಎ ದಾಳಿಯನ್ನು ವಿರೋಧಿಸಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಪೊಲೀಸರ ಕಾರ್ಯಕ್ಕೆ ಅಡ್ಡಿಯುಂಟು ಮಾಡಬೇಡಿ ಎಂದು ಹೇಳಿದರೂ ಸಹ ಪಿಎಫ್​ಐ ಹಾಗೂ ಎಸ್​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದಾರೆ. ಯಾರೂ ಸೋಶಿಯಲ್​ ಮೀಡಿಯಾದಲ್ಲಿನ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.


ಮೊದಲು ನಾವು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ್ದೇವೆ. ಆದರೆ ಜೋಕಟ್ಟೆ ಹಾಗೂ ಕಾವೂರಿನಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಜಮಾಯಿಸುತ್ತಿರುವುದು ಗಮನಕ್ಕೆ ಬಂದ ಬಳಿಕ ಮುಂಜಾಗ್ರತಾ ಕ್ರಮವಾಗಿ ಆರವತ್ತು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಎನ್ಐಎ ತನಿಖೆಯ ಭಾಗವಾಗಿ ಈ ರೀತಿಯ ದಾಳಿ ನಡೆಸಿದೆ. ಇದಕ್ಕೆ ಬಣ್ಣ ಬಳಿಯುವ ಅಗತ್ಯವಿಲ್ಲ ಎಂದು ಪೊಲೀಸ್​ ಆಯುಕ್ತ ಶಶಿ ಕುಮಾರ್​ ಹೇಳಿದ್ದಾರೆ.

ಇದನ್ನು ಓದಿ : PAYCM ಅಭಿಯಾನ ; ಕಾಂಗ್ರೆಸ್ ನಿಂದ PAYTM ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘನೆ ?

ಇದನ್ನೂ ಓದಿ : India Vs Pak Jersey Fight : ಟಿ20 ವಿಶ್ವಕಪ್: “ಕಲ್ಲಂಗಡಿ Vs ಹಾರ್ಪಿಕ್” ; ಭಾರತ Vs ಪಾಕ್ ಜರ್ಸಿ ಜಟಾಪಟಿ ; ಏನಿದು ಹೊಸ ರಗಳೆ ?

Protest against NIA in Mangalore: 60 PFI activists arrested

Comments are closed.