ಮಂಗಳೂರು : ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿನಿಯ ಸಾವಿನ ಸುತ್ತ ಅನುಮಾನ ವ್ಯಕ್ತವಾಗುತ್ತಿದ್ದು, ಕೊಲೆ ಆರೋಪ ಕೇಳಿಬಂದಿದೆ.

ಮಂಗಳೂರು ಹೊರವಲಯದ ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾ (17ವರ್ಷ ) ಎಂಬಾಕೆಯೇ ಸಂಶಯಾಸ್ಪದವಾಗಿ ಸಾವನ್ನಪ್ಪಿದ ದುರ್ದೈವಿ.
ಮಂಗಳೂರು ನಗರದ ನಂತೂರು ಬಳಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಳು. ಇಂದು ಕಾಲೇಜಿಗೆ ರಜೆ ಹಾಕಿ ಮನೆಯಲ್ಲಿಯೇ ಉಳಿದುಕೊಂಡಿದ್ದಳು.

ಅಂಗನವಾಡಿ ಕೆಲಸಕ್ಕೆ ತರಳಿದ್ದ ತಾಯಿ ಮಧ್ಯಾಹ್ನದ ಊಟಕ್ಕೆ ಮನೆಗೆ ಮರಳಿದಾಗ ಮಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆದರೆ ವಿದ್ಯಾರ್ಥಿನಿಯ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಪ್ರೇಕ್ಷಾ ಮಾಡೆಲಿಂಗ್ ನಲ್ಲಿ ಅಸಕ್ತಿ ಹೊಂದಿದ್ದು, ಪೋಟೋ ಶೂಟ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಲು ಇಂದು ಬೆಂಗಳೂರಿಗೆ ತೆರಳಲು ಸಿದ್ದತೆ ಮಾಡಿಕೊಂಡಿದ್ದಳು ಎನ್ನಲಾಗುತ್ತಿದೆ.

ಇಂದು ತಾಯಿ ಮನೆಯಿಂದ ಹೊರ ಹೋಗುತ್ತಿದ್ದಂತೆಯೇ ಮನೆಗೆ ಮೂವರು ಬಂದಿದ್ದಾರೆ ಎನ್ನಲಾಗುತ್ತಿದೆ. ಮನೆಗೆ ಬಂದವರಿಂದಲೇ ಈ ಕೃತ್ಯ ನಡೆದಿದ್ಯಾ ಇಲ್ಲಾ, ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳಾ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.