Recruitment of manual scavengers : ಉಡುಪಿ : ಪೌರಕಾರ್ಮಿಕರಿಗೆ ತರಬೇತಿ ಕಾರ್ಯಾಗಾರ

ಉಡುಪಿ : ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗಳ ನೇಮಕಾತಿ (Recruitment of manual scavengers) ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ರ ಕಾಯ್ದೆ ಹಾಗೂ ನಿಯಮಗಳ ಬಗ್ಗೆ, ಸುರಕ್ಷತಾ ಪರಿಕರಗಳನ್ನು ಬಳಸದೇ ಬರಿಗೈನಿಂದ ಸ್ವಚ್ಛತೆ ಮಾಡಿದ್ದಲ್ಲಿ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಹಾಗೂ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಕೆ ಮಾಡುವುದರ ಕುರಿತು ಪೌರಕಾರ್ಮಿಕರಿಗೆ ತರಬೇತಿ ಕಾರ್ಯಾಗಾರವು ಗುರುವಾರ ನಗರದ ಪುರಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ ಪೌರಾಯುಕ್ತ ರಾಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ರಮೇಶ ಪೌರಕಾರ್ಮಿಕರ ಸಿಂಧುತ್ವ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ತಿಳಿಸಿದರು. ಹಾಗೆಯೇ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶಂಕರ ಮಲ್ಲಾರ್ ಪೌರಕಾರ್ಮಿಕರಿಗೆ ನಿಗಮದಿಂದ ಸಿಗುವ ಸೌಲಭ್ಯಗಳ ಬಗ್ಗೆ ಹೇಳಿದರು.

ಇದನ್ನೂ ಓದಿ : Udupi DC Vidyakumari K : ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

ಇದನ್ನೂ ಓದಿ : Heavy rain in coastal‌ : ಕರಾವಳಿಯಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ : ಯೆಲ್ಲೊ ಅಲರ್ಟ್‌ ಘೋಷಣೆ

ಇನ್ನು ಡಾ.ಸಾತ್ವಿಕ್ ಮಲೇರಿಯಾ, ಡೆಂಗ್ಯೂ, ಇತರೆ ಕಾಯಿಲೆಗಳ ಬಗ್ಗೆ ಹಾಗೂ ನಗರಸಭೆಯ ಪರಿಸರ ಅಭಿಯಂತರರು ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನಗರಸಭೆಯ ಆರೋಗ್ಯ ನಿರೀಕ್ಷಕರು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

Recruitment of manual scavengers: Udupi: Training workshop for civil servants

Comments are closed.