Red Alert Coastal Karnataka : ಕರಾವಳಿಯಲ್ಲಿ ಭಾರೀ ಮಳೆ, ದ.ಕ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು / ಕಾರವಾರ : ಕಳೆದ ಎರಡು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಅಲ್ಲದೇ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ (Red Alert Coastal Karnataka )ಘೋಷಣೆ ಮಾಡಲಾಗಿದೆ.

ಇಂದು ಬೆಳಗಿನಿಂದಲೇ ಕರಾವಳಿ ಜಿಲ್ಲೆಗಳಲ್ಲಿನ ಬಹುಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಅಧಿಕ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಳೆ, ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಅದ್ರಲ್ಲೂ ಉಳ್ಳಾಲ, ಉಚ್ಚಿಲ, ಪಣಂಬೂರು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿದೆ. ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಿದೆ. ಇನ್ನು ಸಮುದ್ರ ತೀರಕ್ಕೆ ಭಾರೀ ಅಲೆಗಳು ಅಪ್ಪಳಿಸುತ್ತಿದೆ.

ಇನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕಾರವಾರ, ಭಟ್ಕಳ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದೆ. ಇಂದು ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಇನ್ನೊಂದೆಡೆಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರದಿಂದಾಗಿ ಅಪಾಯಕ್ಕೆ ಸಿಲುಕಿದ್ದ ಹದಿನೈದು ಮಂದಿ ಮೀನುಗಾರರನ್ನು ಕೋಸ್ಟಲ್‌ ಗಾರ್ಡ್‌ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಅಲ್ಲದೇ ತೀರ ಪ್ರದೇಶದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದೆ. ಉಡುಪಿ, ಕುಂದಾಪುರ, ಬ್ರಹ್ಮಾವರ, ಕೋಟ, ಕಾರ್ಕಳ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ : murder at bengaluru : 50 ರೂಪಾಯಿಗಾಗಿ ಸ್ನೇಹಿತರ ನಡುವೆ ಕಿತ್ತಾಟ :ಆಪ್ತಮಿತ್ರನಿಂದಲೇ ಸ್ನೇಹಿತನ ಕಗ್ಗೊಲೆ

ಇದನ್ನೂ ಓದಿ : Chakda Xpress : ಸಿನಿಮಾಕ್ಕೆ ಮತ್ತೆ ಮರಳಿದ ಅನುಷ್ಕ ಶರ್ಮ

ಇದನ್ನೂ ಓದಿ : Draupadi Murmu : ರಾಷ್ಟ್ರಪತಿ ಸ್ಥಾನಕ್ಕೆ ಬುಡಕಟ್ಟು‌ಮಹಿಳೆ: ಬಿಜೆಪಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ

Red Alert Coastal Karnataka Heavy Rain in Udupi Dakshina Kannada and Uttara Kannada

Comments are closed.