ಉಡುಪಿ ಜಿಲ್ಲೆಯಲ್ಲಿ ನಾಳೆ ರೆಡ್‌ ಅಲರ್ಟ್‌ : ಶಾಲೆಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ

ಉಡುಪಿ : Red alert : ಕಳೆದ ಮೂರ್ನಾಲ್ಕು ದಿನಗಳಿಂದಲೂ ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಭಾರೀ ಮಳೆ ಸುರಿಯಲಿದ್ದು, ನಾಳೆ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ. ಆದರೆ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಆಯಾಯ ತಹಶೀಲ್ದಾರರಿಗೆ ನೀಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ. ಆದೇಶ ಹೊರಡಿಸಿದ್ದಾರೆ.

ಉಡುಪಿ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ ಜಿಲ್ಲೆಯ ಬೈಂದೂರು, ಕಾಪು ತಾಲೂಕುಗಳಲ್ಲಿ ಭಾರೀ ಮಳೆ ಸುರಿದಿದ್ದು, ಉಡುಪಿ ಜಿಲ್ಲೆಯಾದ್ಯಂತ ಮುಂದುವರಿಯುವ ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯಲ್ಲಿ ನಾಳೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದ್ದು, ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ತಹಶೀಲ್ದಾರ್‌ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿತ್ತು. ಇಂದೂ ಕೂಡ ಮಳೆ ಮುಂದುವರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಳೆ ಕೂಡ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 3.5 – 4.1 ಮೀ. ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು, ಕಡಲತೀರದ ವಾಸಿಗಳು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : NEET Exam fraud : ನೀಟ್ ಪರೀಕ್ಷೆ ವಂಚನೆ : ಪರೀಕ್ಷೆ ವೇಳೆ ವೈದ್ಯಕೀಯ ವಿದ್ಯಾರ್ಥಿಗಳನ್ನು ವಂಚಿಸಿದ್ದಕ್ಕಾಗಿ ಏಮ್ಸ್ ವಿದ್ಯಾರ್ಥಿಗಳನ್ನು ಬಂಧಿಸಿದ ದೆಹಲಿ ಪೊಲೀಸರು

ಇದನ್ನೂ ಓದಿ : ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Comments are closed.