ಭಾನುವಾರ, ಏಪ್ರಿಲ್ 27, 2025
HomeCoastal NewsAgumbe Ghat : ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ : ಉಡುಪಿ ಡಿಸಿ...

Agumbe Ghat : ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ : ಉಡುಪಿ ಡಿಸಿ ಕೂರ್ಮರಾವ್‌ ಆದೇಶ

- Advertisement -

ಉಡುಪಿ : ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್‌ ರಸ್ತೆಯಲ್ಲಿ (Agumbe Ghat) ಒಂದು ತಿಂಗಳ ಕಾಲ ಭಾರೀ ವಾಹನಗಳಿಗೆ ನಿರ್ಬಂಧ ಹೇರಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ. ಅವರು ಆದೇಶ ಹೊರಡಿಸಿದ್ದಾರೆ.

ಆಗುಂಬೆ ಘಾಟಿ ರಸ್ತೆಯ 11 ನೇ ತಿರುವಿನಲ್ಲಿ ಭೂ ಕುಸಿತವಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ಅಗಸ್ಟ್‌ 20ರ ವರೆಗೆ ಲಘುವಾಹನಗಳ ಸಂಚಾರಕ್ಕೆ ಮಾತ್ರವೇ ಅನುಮತಿಯನ್ನು ನೀಡಲಾಗಿದ್ದು, ಭಾರೀ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿತ್ತು. ಆದ್ರೀಗ ಘಾಟಿ ರಸ್ತೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ದಿಂದ ತೊಂದರೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಪ್ಟೆಂಬರ್‌ 30ರ ವರೆಗೆ ಭಾರೀ ವಾಹನಗಳ ನಿರ್ಬಂಧಕ್ಕೆ ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಶೃಂಗೇರಿ ಉಪವಿಭಾಗ ಇವರು ಮನವಿ ಮಾಡಿಕೊಂಡಿದ್ದರು.

ಸಾರ್ವಜನಿಕರ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತೆ ಒಂದು ತಿಂಗಳ ಕಾಲ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ್ದಾರೆ. ಈ ಅವಧಿಯಲ್ಲಿ ಲಘು ವಾಹನ ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಿದ್ದಾರೆ. ವರ್ಷಂಪ್ರತಿ ಮಳೆಗಾಲದಲ್ಲಿ ಆಗುಂಬೆ ಘಾಟ್‌ ರಸ್ತೆಯನ್ನು ಹಲವು ತಿಂಗಳ ಕಾಲ ಬಂದ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಅದ್ರಲ್ಲೂ ಮಲೆನಾಡಿನ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕ್ರಮಕೈಗೊಂಡಿದೆ.

ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಿನ್ನೆಯಿಂದಲೂ ಬೆಂಗಳೂರಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಅವರು ರಜೆ ಘೋಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿಲಿಕಾನ್‌ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿವೆ. ಅಲ್ಲದೇ ಸೋಮವಾರ ಹಲವು ಕಡೆಗಳಲ್ಲಿ ಬೃಹತ್‌ ಮರಗಳು ಧರೆಗೆ ಉರುಳಿ ಬಿದ್ದಿವೆ. ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : Ramya : ‘ನಾಳೆ ಅಧಿಕೃತವಾಗಿ ಗುಡ್​ ನ್ಯೂಸ್​ ನೀಡುವೆ’ : ಫ್ಯಾನ್ಸ್​ ತಲೆಯಲ್ಲಿ ಹುಳಬಿಟ್ಟ ನಟಿ ರಮ್ಯಾ

ಇದನ್ನೂ ಓದಿ : Savarkar adhyayana peetha : ತುಮಕೂರಿನಲ್ಲೂ ಹೆಚ್ಚಾಯ್ತು ಸಾವರ್ಕರ್​ ದಂಗಲ್​ : ಸಾವರ್ಕರ್​ ಅಧ್ಯಯನ ಪೀಠ ಸ್ಥಾಪಿಸದಂತೆ ಒತ್ತಾಯ

Restriction on heavy vehicle traffic Agumbe Ghat Udupi DC Kurma Rao order

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular