ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಕಿಶೋರ್ ಅಮಾನ್ ಹಾಗು ಅಕೀಲ್ ನೌಶೀನ್‌ರನ್ನ ಅಕ್ಟೋಬರ್ 9 ವರೆಗೆ ನ್ಯಾಯಾಂಗ ಬಂಧನವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಬಂಧಿತರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಅ.9 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.

ಸೆಪ್ಟೆಂಬರ್ 19ರಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ನಟ, ಡ್ಯಾನ್ಸರ್ ಕಿಶೋರ್ ಅಮನ್ ಸಹಿತ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ ಎಂಡಿಎಂ ಪೌಡರ್, ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.