ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್‌ಗಾಗಿ (Santhekatte road collapse) ತೋಡಿರುವ ಹೊಂಡ ಮಳೆಯಿಂದಾಗಿ ಸರ್ವಿಸ್ ರಸ್ತೆ ಇಂದು ಬೆಳಿಗ್ಗೆ ಕುಸಿದು ಬಿದ್ದಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಎಚ್ಚರದಿಂದ ಇರಬೇಕಾದ ಪರಿಸ್ಥಿತಿ ಎದುರಾಗಿದೆ.
ಕಳೆದ ಜನವರಿ 16ರಿಂದ ಸಂತಕಟ್ಟೆ ಅಂಡರ್ ಪಾಸ್ ಕಾಮಗಾರಿಯು ಪ್ರಾರಂಭಗೊಂಡಿದ್ದು, ಮಂದಗತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟದಿಂದಾಗಿ ಈ ಘಟನೆ ಸಂಭವಿಸಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗೆ ಹಾನಿಯಾಗಿದ್ದಲ್ಲದೇ ಮಣ್ಣು ಅಂಡರ್‌ಪಾಸ್‌ನ ತಡೆಗೋಡೆ ಮೇಲೆ ಕೂಡ ಬಿದ್ದಿರುವುದರಿಂದ ಕಾಮಗಾರಿಗೆ ತೊಡಕಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಉಡುಪಿ ಸಂತಕಟ್ಟೆ ಸರ್ವಿಸ್ ರಸ್ತೆ ಕುಸಿಯುತ್ತಿರುವ ವಾಹನದಲ್ಲಿ ಸಂಚರಿಸುವವರು ಆತಂಕಕ್ಕೆ ಒಳಾಗಿದ್ದು, ಈ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಗೊಳ್ಳಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : Gas leak : ಕುಮಟಾದ ಕಡೇಕೋಡಿ ಬಳಿ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ
ಇದನ್ನೂ ಓದಿ : Heavy Rainfall in Karnataka : ರಾಜ್ಯದ ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರೀ ಮಳೆ ಸಾಧ್ಯತೆ
ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್ ಅತ್ಯಂತ ವಾಹನ ದಟ್ಟಣೆಯಿಂದ ಕೂಡಿದ್ದು, ಪ್ರತಿ ದಿನ 4500 ಕ್ಕೂ ಹೆಚ್ಚು ವಾಹನಗಳು ಇಲ್ಲಿ ಸಂಚರಿಸುತ್ತವೆ. ಇದು ಪ್ರಮುಖ ಬ್ಲಾಕ್ ಸ್ಪಾಟ್ ಆಗಿ ಗುರುತಿಸಲಾಗಿದೆ. ಈ ಭಾಗದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಓವರ್ ಪಾಸ್ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಹಲವು ವರ್ಷಗಳಿಂದ ಇದು ಸಾರ್ವಜನಿಕರ ಪ್ರಮುಖ ಬೇಡಿಕೆ ಆಗಿತ್ತು. ಆದರೆ ಇದೀಗ ಇಲ್ಲಿ ಸಂಚರಿಸುವ ಜನರಿಗೆ ಆತಂಕಕ್ಕೆ ಒಳಗಾಗುವಂತೆ ಮಾಡಿದೆ.
Santhekatte road collapse: Motorists beware: Santhekatte national highway underpass service road collapsed due to rain