School College holiday : ಭಾರೀ ಮಳೆ ಮುನ್ಸೂಚನೆ ಉಡುಪಿ ಶಾಲಾ-ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು (School College holiday) ರೆಡ್ ಅಲರ್ಟ್‌ ಸೂಚಿಸಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು (ಜುಲೈ 24) ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಜಿಲ್ಲೆಯಲ್ಲಿ ಜುಲೈ 25ರಂದು ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಳಿದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌, ಐಟಿಐ ರಜೆ ಇರುವುದಿಲ್ಲ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ಇರುತ್ತದೆ. ಆದರೂ ಕಾಲೇಜುಗಳಲ್ಲಿ ಪಾಠ ಪ್ರವಚನಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಗಳನ್ನು ನೀಡಲಾಗಿದೆ.

  • ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
  • ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
  • ಕಠಿಣವಾದ ದಾರ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
  • ದುರ್ಬಲ ಅಥವಾ ಶಿಥಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
  • ಈಗ ಮಳೆಯಾಗುವ ಮುಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶಿನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
  • ವಿದ್ಯಾರ್ಥಿಗಳ ಪೋಷಕರು ಅಥವಾ ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳ ನೀರು ಇರುವ ತಗ್ಗು ಪ್ರದೇಶ, ಕರೆ, ನದಿ ತೀರ, ಸಮುದ್ರತೀರಕ್ಕೆ ಹೋಗದಂತೆ ಎಚ್ಚರ ವಹಿಸುವುದು.
  • ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
  • ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

ಇದನ್ನೂ ಓದಿ : Udupi power cut : ಉಡುಪಿ : ಜುಲೈ 25, 26 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ವಿದ್ಯುತ್‌ ಕಡಿತ, ಇಲ್ಲಿದೆ ಮಾಹಿತಿ

School College Holiday: Heavy rain forecast, holiday announced for Udupi schools and colleges on July 25

Comments are closed.