ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ಯು.ಆರ್.ಸಭಾಪತಿ ನಿಧನ

ಉಡುಪಿ : ಉಡುಪಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್‌ ಮುಖಂಡ ಯು.ಆರ್.ಸಭಾಪತಿ (UR Sabapathi Death) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. 1989 ರಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದ ಯು.ಆರ್.ಸಭಾಪತಿ ಅವರು ಬಂಡಾಯವಾಗಿ ಸ್ಪರ್ಧಿಸಿ ಮನೋರಮಾ ಮಧ್ವರಾಜ್‌ ವಿರುದ್ದ ಸೋಲನ್ನು ಕಂಡಿದ್ದರು. ಆದರೆ 2004 ರಲ್ಲ ಎಸ್.ಬಂಗಾರಪ್ಪ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಉಡುಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಮೂಲಕ ವಿಧಾನಸಭೆಯನ್ನು ಪ್ರವೇಶಿಸಿದ್ದರು. 1999ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಉಡುಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ 2004 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘುಪತಿ ಭಟ್‌ ಅವರ ವಿರುದ್ದ ಸ್ಪರ್ಧಿಸಿ ಸೋಲನ್ನು ಕಂಡಿದ್ದರು.

ಹಿರಿಯ ಕಾಂಗ್ರೆಸ್‌ ನಾಯಕರಾಗಿದ್ದ ಯು.ಆರ್.ಸಭಾಪತಿ ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ ಸದಸ್ಯರಾಗಿದ್ದ ಯು.ಆರ್.ಸಭಾಪತಿ ಅವರು ಪರಿಷತ್‌ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದಲೂ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರೂ ಕೂಡ ಅವರಿಗೆ ಟಿಕೆಟ್‌ ಸಿಕ್ಕಿರಲಿಲ್ಲ. ಯು.ಆರ್.ಸಭಾಪತಿ (UR Sabapathi Death) ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಲ್ಲದೇ ಹಿರಿಯ ಕಾಂಗ್ರೆಸ್‌ ಮುಖಂಡನ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : 200 ಯುನಿಟ್ ಉಚಿತ ವಿದ್ಯುತ್ ಸೇರಿ ಯಾವ ಭರವಸೆಯೂ ಈಡೇರುವುದಿಲ್ಲ : ಶಾಸಕ ಕಾರ್ಕಳ ಸುನಿಲ್‌ ಕುಮಾರ್‌

ಇದನ್ನೂ ಓದಿ : ಮುಸ್ಲಿಂ ಯುವಕನೊಂದಿಗೆ ಬಿಜೆಪಿ ಮಾಜಿ ಶಾಸಕಿ ಮಗಳ ಮದುವೆ ರದ್ದು

Comments are closed.