Separate covid rules: ಉಡುಪಿ ಜಿಲ್ಲೆಗೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ ಜಾರಿ: ಡಿಸಿ ಕೂರ್ಮರಾವ್

ಉಡುಪಿ: (Separate covid rules) ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಹೊಸ ವರ್ಷದ ಸಂಭ್ರಮಾಚರಣೆಯ ನಿಮಿತ್ತ ಉಡುಪಿ ಜಿಲ್ಲೆಗೆ ಜಿಲ್ಲಡಳಿತವು ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹೊಸ ವರ್ಷಕ್ಕೆ ಕ್ಷಣಗಣನೇ ಆರಂಭವಾಗಿದೆ. ನಾಡಿನ ಜನತೆ ಕಾತರದಿಂದ ಕಾಯುತ್ತಿದ್ದ ಕ್ಷಣ ಇನ್ನೇನು ಹತ್ತಿರದಲ್ಲಿದೆ. ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಡಳಿತ ಕೋವಿಡ್‌ ಮಾರ್ಗಸೂಚಿ(Separate covid rules)ಗಳನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್‌ 31 ರ ರಾತ್ರಿ ಯಿಂದ ಜನವರಿ 1 ಮತ್ತು 2 ರಂದು ಆಚರಿಸುವ ಹೊಸ ವರ್ಷಾಚರಣೆಯ ಸಮಾರಂಭವನ್ನು ಮಧ್ಯರಾತ್ರಿ ಒಂದು ಗಂಟೆಯ ಒಳಗೆ ಮುಗಿಸಬೇಕು. ದೊಡ್ಡ ಮಟ್ಟದಲ್ಲಿ ನಡೆಯುವ ಸಮಾರಂಭಗಳನ್ನು ಬೆಳಗಿನ ಹೊತ್ತಿನಲ್ಲಿ ಹೊರಾಂಗಣ ಪ್ರದೇಶದಲ್ಲಿ ನಡೆಸಲು ಕಡ್ಡಾಯ ಮಾಡಲಾಗಿದೆ. ಸಾಧ್ಯವಾದಷ್ಟು ಹೊಸ ವರ್ಷಾಚರಣೆಯನ್ನು ತಡೆಯಲು ಸೂಚಿಸಲಾಗಿದೆ.

ಸಾರ್ವಜನಿಕ ಪ್ರದೇಶಗಳಲ್ಲಿಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಮೀರದಂತೆ ಕ್ರಮಕೈಗೊಳ್ಳಬೇಕು. ಹೋಟೆಲ್‌, ಬಾರ್‌, ರೆಸ್ಟೋರೆಂಟ್‌, ರೆಸಾರ್ಟ್‌, ಪಬ್‌ ನಲ್ಲಿ ಹೆಚ್ಚು ಜನರು ಸೇರುವಂತಿಲ್ಲ. ಹಾಗೆಯೇ ಸಾರ್ವಜನಿಕ ಪ್ರದೇಶಗಳಲ್ಲಿ, ಸರ್ಕಾರಿ ಕಚೇರಿಗಳು, ದೇವಸ್ಥಾನ, ಬಸ್‌ ನಿಲ್ದಾಣ, ಕಾರ್ಖಾನೆ ಹಾಗೂ ಎಲ್ಲಾ ಪ್ರದೇಶಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹ್ಯಾಂಡ್‌ ಸ್ಯಾನಿಟೈಜರ್‌ ಬಳಸುವುದನ್ನು ಕೂಡ ಕಡ್ಡಾಯಮಾಡಲಾಗಿದೆ.

ಹೋಟೆಲ್‌, ಪಬ್‌, ಬಾರ್‌ಗಳಲ್ಲಿ ಮಾಲೀಕರು, ಸಿಬ್ಬಂಧಿಗಳು ಹಾಗೂ ಗ್ರಾಹಕರಿಗೆ ಕಡ್ಡಾಯವಾಗಿ ಎರಡು ಬೂಸ್ಟರ್‌ ಡೋಸ್‌ ಲಸಿಕೆಗಳನ್ನು ಪಡೆದುಕೊಂಡಿರಬೇಕು. ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳತಕ್ಕದ್ದು. ಅನಾರೋಗ್ಯ ಪೀಡಿತರು, ಗರ್ಭಿಣಿಯರು, ಬಾಣಂತಿಯರು, ವಯಸ್ಕರು ಆಚರಣೆಯ ಸಮಾರಂಭದಿಂದ ದೂರವಿರಬೇಕು.

ಸಾರ್ವಜನಿಕ ಪ್ರದೇಶಗಳಲ್ಲಿ, ಬಾರ್‌, ರೆಸ್ಟೋರೆಂಟ್‌ ಗಳಲ್ಲಿ ಹಾಗೂ ಇನ್ನೀತರ ಪ್ರದೇಶಗಳಲ್ಲಿ ಗುಂಪು ಸೇರುವುದನ್ನು ತಡೆಯಬೇಕು. ಒಳಾಂಗಣ ಪ್ರದೇಶಗಳಲ್ಲಿ, ಸಮಾರಂಭಗಳು ನಡೆಯುವ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಸಿನಿಮಾ ಮಂದಿರಗಳಿಗೆ ಹೋಗುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಒಳಾಂಗಣ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶಕ್ಕೂ ಮೊದಲು ಥರ್ಮಲ್‌ ಸ್ಕ್ರೀನಿಂಗ್‌ ನಡೆಸುವಂತೆ ಸೂಚಿಸಲಾಗಿದೆ.

ಸಮಾರಂಭಗಳಲ್ಲಿ ಯಾರಾದರೂ ಅಸ್ವಸ್ಥಗೊಂಡಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ ಸೇವೆಯನ್ನು ಮುಂಚಿತವಾಗಿಯೇ ಮಾಡಿಕೊಂಡಿರಬೇಕು ಎಂದು ಉಡುಪಿಯ ಜಿಲ್ಲಾಧಿಕಾರಿ ಕೂರ್ಮರಾವ್‌ ತಿಳಿಸಿದ್ದಾರೆ. ಈ ಎಲ್ಲಾ ನಿಯಮಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದು, ನಿಯಮಗಳು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳುವುದಾಗಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ : Break for New year: ಹೊಸ ವರ್ಷಾಚರಣೆಗೆ ಬ್ರೇಕ್:‌ ನಂದಿಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಇದನ್ನೂ ಓದಿ : Udupi mask compulsory: ಉಡುಪಿಯ ಚಿತ್ರಮಂದಿರ, ಮಾಲ್‌ ಹೋಟೆಲ್‌ ಗಳಲ್ಲಿ ಮಾಸ್ಕ್‌ ಕಡ್ಡಾಯ

As a precautionary measure against the backdrop of the increasing number of corona infections in the country and the state, the district administration has released the Covid guidelines for the Udupi district on the occasion of New Year celebrations.

Comments are closed.