Sexual assault against minor: ಉಡುಪಿ : ಬಾಲಕಿಗೆ ಲೈಂಗಿಕ ದೌರ್ಜನ್ಯ, ಅಪರಾಧಿಗೆ 10 ವರ್ಷ ಜೈಲು, 20 ಸಾವಿರ ರೂ. ದಂಡ

ಉಡುಪಿ: (Sexual assault against minor) ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ದೌರ್ಜನ್ಯ ನಡೆಸಿದ ಅಪರಾಧಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಎಂದು ಆದೇಶಿಸಿದೆ. ಕುಂದಾಪುರ ತಾಲೂಕಿನ ಅಮಾಸೆಬೈಲು ನಿವಾಸಿ ಸುರೇಶ್‌ ಕೊಠಾರಿ ಎನ್ನುವಾತ ಶಿಕ್ಷೆಗೆ ಗುರಿಯಾದ ವ್ಯಕ್ತಿ.

ಆರೋಪಿ ಸುರೇಶ್‌ ಖಾಸಗಿ ಶಾಲೆಯೊಂದರ ಬಸ್‌ ಚಾಲಕನಾಗಿದ್ದು, ಅದೇ ಬಸ್ಸಿನಲ್ಲಿ ಆಯಾ ವೃತ್ತಿ ಮಾಡುತ್ತಿದ್ದ 17 ವರ್ಷದ ಯುವತಿಯ ಪರಿಚಯ ಮಾಡಿಕೊಂಡು ಅದನ್ನು ದುರ್ಬಳಕೆ ಮಾಡಿಕೊಂಡ ಆರೋಪಿ ಆಕೆಯ ಮೊಬೈಲ್‌ ನಂಬರ್‌ ಪಡೆದಿದ್ದ. ಘಟನೆ ದಿನ ಶಾಲಾ ಮಕ್ಕಳನ್ನು ಬಿಟ್ಟ ಬಳಿಕ ಆಕೆಯಲ್ಲಿ ಮಾತನಾಡಲು ಇದೆಯೆಂದು ಹೇಳಿ ಬೈಕಿನಲ್ಲಿ ಕಾಡು ಪ್ರದೇಶಕ್ಕೆ ಕರೆದೊಯ್ದು ಬಲಾತ್ಕಾರವಾಗಿ ಅತ್ಯಾಚಾರ(Sexual assault against minor) ವೆಸಗಿದ್ದಲ್ಲದೇ, ನಂತರದ ದಿನಗಳಲ್ಲಿಯೂ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರವೆಸಗಿದ್ದ.

ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಸಂತ್ರಸ್ತ ಬಾಲಕಿ:
ಹಲವು ಬಾರಿ ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದು ತನ್ನ ಮನೆಯ ಬಚ್ಚಲು ಕೋಣೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಬಳಿಕ ಅಪ್ರಾಪ್ತ ವಯಸ್ಸಿನ ತಾಯಿ ಹಾಗೂ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ನೊಂದ ಬಾಲಕಿಯ ತಾಯಿ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.

30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆ:
ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಸುರೇಶ್‌ನನ್ನು ಬಂಧಿಸಿದ್ದು, ನಂತರದಲ್ಲಿ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದಿದ್ದ. ಕುಂದಾಪುರ ವೃತ್ತ ನಿರೀಕ್ಷಕರಾಗಿದ್ದ ಮಂಜಪ್ಪ ಡಿ.ಆರ್‌. ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 30 ಸಾಕ್ಷಿಗಳ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆ ಕೂಡ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅದಕ್ಕೆ ಪೂರಕವಾದ ಸಾಕ್ಷಿಗಳ ಸಹಿತ ಡಿಎನ್‌ಎ ವರದಿಯು ಆರೋಪಿ ಸುರೇಶ್‌ನನ್ನು ದೋಷಿ ಎಂದು ಸಾಬೀತು ಪಡಿಸಿದೆ. ಸಂತ್ರಸ್ತೆಯ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ವಾದಿಸಿದ್ದರು. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರ ಆರೋಪಿಯನ್ನು ದೋಷಿಯೆಂದು ಗುರುವಾರ ತೀರ್ಪು ನೀಡಿದ್ದು, ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಎಂದು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : Eye infection : ಕರಾವಳಿಯಲ್ಲಿ ಹರಡುತ್ತಿದೆ ಕೆಂಗಣ್ಣು ಬೇನೆ : ಮಕ್ಕಳನ್ನು ಕಾಡುತ್ತಿದೆ ಮದ್ರಾಸ್ ಐ

ಇದನ್ನೂ ಓದಿ : POCSO Case : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಐವರು ಆರೋಪಿಗಳ ಬಂಧನ

ಆರೋಪಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ:
ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು, 10 ಸಾವಿರ ರೂ. ದಂಡ ವಿಧಿಸಿದ್ದು, ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೊ ಕಾಯಿದೆಯಡಿ 10 ವರ್ಷ(ಏಕಕಾಲದಲ್ಲಿ ಎರಡು ಶಿಕ್ಷೆಯನ್ನುಅನುಭವಿಸಲು ಆದೇಶ) ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ1 ವರ್ಷ ಹೆಚ್ಚುವರಿ ಶಿಕ್ಷೆ ಹಾಗೂ ಸಂತ್ರಸ್ತೆಗೆ 1 ಲಕ್ಷ ರೂ. ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯವು ಆದೇಶಿಸಿದೆ. ಆರೋಪಿಗೆ ವಿಧಿಸಿದ 20 ಸಾವಿರ ದಂಡದಲ್ಲಿ ಸಂತ್ರಸ್ತೆಗೆ 15 ಸಾವಿರ ಹಾಗೂ 5ಸಾವಿರ ರೂ. ಸರ್ಕಾರಕ್ಕೆ ಪಾವತಿಸಲು ಆದೇಶಿಸಿದೆ.

(Sexual assault against minor) The Udupi District Court has ordered ten years rigorous imprisonment and fine to the criminal who assaulted a minor girl. The convicted person is Suresh Kothari, a resident of Amasebailu in Kundapur taluk.

Comments are closed.