Sexual assault case: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: 20 ವರ್ಷ ಜೈಲು 50 ಸಾವಿರ ದಂಡ

ಬೆಳ್ತಂಗಡಿ: (Sexual assault case) ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಳಪಲ್ಕೆ ಮಠ ಎಂಬಲ್ಲಿ ಆರೋಪಿ ಕೊಂಬರೋಡಿ ಬಾಬಿ ಎನ್ನುವಾತ ಅಪ್ರಾಪ್ರ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದೆ.

ನೊಂದ ಬಾಲಕಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪ ಸಾಬೀತಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ ಇಪ್ಪತ್ತು ವರ್ಷಗಳ ಕಠಿಣ ಕಾರಾಗೃಹ ಹಾಗೂ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ. ಒಂದು ವೇಳೆ ದಂಡ ಕಟ್ಟಲು ತಪ್ಪಿದ್ದಲ್ಲಿ ಆರು ತಿಂಗಳ ಕಾಲ ಕಠಿಣ ಕಾರಾಗೃಹ ವಾಸ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಋಷಿಕೇಸ್‌ ಭಗವಾನ್‌ ಸೋನಾವಣೆ, ಐಪಿಎಸ್‌, ಧರ್ಮಪ್ಪ ಹಾಗೂ ಬಂಟ್ವಾಳ ಪೊಲೀಸ್‌ ಉಪಾಧೀಕ್ಷಕರಾದ ಪ್ರತಾಪ್‌ ಸಿಂಗ್‌ ಥೋರಾಟ್‌ ಅವರ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್‌ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ ಅವರು ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಹೆಡ್‌ ಕಾನ್ಸ್ಟೇಬಲ್‌ ವಿಜಯ್‌ ಕುಮಾರ್‌ ರೈ ಅವರು ಕಾರ್ಯನಿರ್ವಹಿಸಿದ್ದು, ಸರಕಾರದ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ವೆಂಕಟರಮಣ ಸ್ವಾಮಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ಇದನ್ನೂ ಓದಿ : Dharmasthala: ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

ಇದನ್ನೂ ಓದಿ : Warrior heart attack death: ತಾಯಿಯ ವರ್ಷದ ಕಾರ್ಯಕ್ಕೆ ಹುಟ್ಟೂರಿಗೆ ಬರುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಇದನ್ನೂ ಓದಿ : Cement container accident: ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್‌ ಕಂಟೈನರ್‌ ಪಲ್ಟಿ: ಕಾರು ಜಖಂ

Sexual assault case: Sexual assault case on a minor girl: 20 years imprisonment and 50 thousand fine

Comments are closed.