Student dies of fever: ಜ್ವರದಿಂದ ಆರನೇ ತರಗತಿ ಬಾಲಕ ಸಾವು

ಉಳ್ಳಾಲ: (Student dies of fever) ಕಳೆದ ಎರಡು ದಿನಗಳಿಂದ ತಲೇನೋವು ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್‌ ಮೃತ ಬಾಲಕ.

ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಅಶ್ವಿತ್‌ ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ. ನಾಳೆ ಶಾಲೆಯಲ್ಲಿ ನಡೆಯಲಿರುವ ವಾರ್ಷಿಕೋತ್ಸವದಲ್ಲಿ ಭಾಗವಹಿಸಲೂ ಕೂಡ ತಯಾರಿ ನಡೆಸಿದ್ದ. ಆದರೆ ಜ್ವರದಿಂದ ಆತ ಸಾವನ್ನಪ್ಪಿದ್ದು (Student dies of fever), ಈತ ಮೆದುಳು ಜ್ವರದಿಂದ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು.ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಕೂಡ ಪ್ರತಿಭಾನ್ವಿತನಾಗಿದ್ದು, ಎಲ್ಲಾ ಶಿಕ್ಷಕರ ಪ್ರೀತಿ ಪಾತ್ರನಾದ ವಿದ್ಯಾರ್ಥಿಯಾಗಿದ್ದ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ , ಕುಟುಂಬ ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಇದೀಗ ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮೆದುಳು ಜ್ವರದ ಲಕ್ಷಣ ಇರುವುದಾಗಿ ಹೇಳಲಾಗುತ್ತಿದ್ದು, ಆತನಿಗೆ ಮೆದುಳು ಜ್ವರದ ವ್ಯಾಕ್ಸಿನೇಷನ್‌ ಆಗಿರುವ ಬಗ್ಗೆ ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Rape case-accused suicide: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಬಂಧಿತ ಆರೋಪಿ ಮುಂಬೈ ಜೈಲಿನಲ್ಲಿ ಆತ್ಮಹತ್ಯೆ

ಇದನ್ನೂ ಓದಿ : Pakistan Murder: ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ; ತಲೆ ಕಡಿದು, ಚರ್ಮ ಸುಲಿದು ಪೈಶಾಚಿಕ ಕೃತ್ಯ

ಇದನ್ನೂ ಓದಿ : Corporative society president arrested: ನೂರಾರು ಕೋಟಿ ವಂಚಿಸಿ ಪರಾರಿಯಾಗಿದ್ದ ಉಡುಪಿಯ ಕಮಲಾಕ್ಷಿ ಸಂಘದ ಅಧ್ಯಕ್ಷ ಅರೆಸ್ಟ್‌

The death of a sixth class boy who was suffering from fever for the last two days took place in Ullala, Mangalore. Ashwit, a student of class six, is the dead boy.

Comments are closed.