Students protest against board: ಅಂಕಪಟ್ಟಿಯಲ್ಲಿ ವಿಳಂಬ: ಮಂಗಳೂರು ವಿವಿ ವಿರುದ್ದ ಬೀದಿಗಿಳಿದ ವಿದ್ಯಾರ್ಥಿಗಳು

ಕುಂದಾಪುರ: (Students protest against board) ಮಂಗಳೂರು ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದು, ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿರುವ ಹಿನ್ನಲೆಯೆಲ್ಲಿ ಆಕ್ರೋಶಗೊಂಡ ವಿದ್ಯಾರ್ಥಿಗಳು ತಮಗೆ ಆಗುತ್ತಿರುವ ಶೈಕ್ಷಣಿಕ ಸಮಸ್ಯೆಯ ಕುರಿತು ಡಿ. 15 ರಂದು ಎಬಿವಿಪಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಸಿದರು.

ಮಂಗಳೂರು ವಿಶ್ವವಿದ್ಯಾಲಯದ (Students protest against board) ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದು, ಅಂಕಪಟ್ಟಿ ಬಾರದ ಹಿನ್ನಲೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಹಲವು ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ಬಂದ ಹಣವನ್ನೇ ತಮ್ಮ ವಿದ್ಯಾಭ್ಯಾಸಕ್ಕಾಗಿ ಬಳಸಿಕೊಳ್ಳುತ್ತಿದ್ದು, ಅಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೆ ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ ಇರುವುದು, ಮರು ಪರೀಕ್ಷೆ ಹಾಗೂ ಮರುಮೌಲ್ಯಮಾಪನಗಳಲ್ಲಿ ಗೊಂದಲ, ಮರು ಮೌಲ್ಯಮಾಪನದಲ್ಲಿ ಶುಲ್ಕ ಮರುಪಾವತಿಗೆ ನಿಗದಿ ಪಡಿಸಿದಷ್ಟು ಅಂಕ ಬಂದರೂ ಸಹ ಕಟ್ಟಿದ ಶುಲ್ಕವು ಮರುಪಾವತಿಯಾಗಿಲ್ಲ.

ಇದರ ಜೊತೆಗೆ ಎನ್.ಇ.ಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಕೂಡ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನ ಈವರೆಗೂ ನಡೆದಿಲ್ಲ. ಆದರೂ ಕೂಡ ತೃತೀಯ ಸೆಮಿಸ್ಟರ್ ನಲ್ಲಿರುವ ವಿದ್ಯಾರ್ಥಿಗಳಿಗೆ ಈ ಹಿಂದಿನ ಎರಡು ಸೆಮಿಸ್ಟರ್ ನ ಫಲಿತಾಂಶ ನೀಡದಿದ್ದರೂ ಮೂರನೇ ಸೆಮಿಸ್ಟರ್ ನ ಪರೀಕ್ಷಾ ಶುಲ್ಕವನ್ನು ಪಡೆದುಕೊಂಡಿದ್ದಾರೆ.

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ನಾತಕ್ಕೋತ್ತರ ವಿಭಾಗಗಳಿಗೆ ಸೇರ್ಪಡೆಯಾಗಲು ಆಗದೆ ಪರದಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಬೇಜವಬ್ದಾರಿತನದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇದಕ್ಕೆಲ್ಲಾ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಪರೀಕ್ಷಾಂ ಕುಲಸಚಿವರು ನೇರ ಹೊಣೆಯಾಗಿದ್ದು, ಇದಕ್ಕೆ ಸಂಬಂಧಪಟ್ಟವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕಾಗಿ ಆಗ್ರಹಿಸಿ ಇಂದು ಕುಂದಾಪುರ ಭಾಗದ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ಕೈಗೊಂಡಿದ್ದಾರೆ. ಕುಂದಾಪುರದ ಶಾಸ್ತ್ರಿ ವೃತ್ತದಿಂದ ಮಿನಿವಿಧಾನಸೌಧದ ವರೆಗೂ ತಮಗೆ ಆಗುತ್ತಿರುವ ಶೈಕ್ಷಣಿಕ ಸಮಸ್ಯೆಯನ್ನು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ ನಡೆಯಿತು.

ಇದನ್ನೂ ಓದಿ : Public Examination: 5 ಮತ್ತು 8ನೇ ತರಗತಿ ಪಬ್ಲಿಕ್‌ ಪರೀಕ್ಷೆಗೆ ವಿರೋಧ : ಪ್ರತಿಭಟನೆ ಎಚ್ಚರಿಕೆ

ಪ್ರತಿಭಟನೆಯಲ್ಲಿ ಕುಂದಾಪುರದ ಡಾ.ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಭಂಡಾರ್ ಕಾರ್ಸ್ ಕಾಲೇಜು ಹಾಗೂ ಕಾಳಾವರ ವರದರಾಜ ಎಮ್ ಶೆಟ್ಟಿ ಸರಕಾರಿ ಪದವಿ ಕಾಲೇಜು ಕಾಗೇರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಸಂಚಾಲಕ್ ಧನುಷ್ ಪೂಜಾರಿ, ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ ,ಬಿ.ಬಿ ಹೆಗ್ಡೆ ಕಾಲೇಜು ಘಟಕದ ಅಧ್ಯಕ್ಷ ವಿಘ್ನೇಶ್ ಶೆಟ್ಟಿ, ಭಂಡಾರ್ಕಾರ್ಸ್ ಕಾಲೇಜು ಘಟಕದ ಅಧ್ಯಕ್ಷ ವೀಕ್ಷಿತ್, ಕಾಗೇರಿ ಕಾಲೇಜು ಘಟಕದ ಅಧ್ಯಕ್ಷ ಚೇತನ್ ಬೃಹತ್‌ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

(Students protest against board) In the background of Mangalore University not giving marks to the students and it is becoming a problem to apply for the scholarship, the students who are outraged about the educational problem they are facing D. On 15th, Bharat led a protest under the leadership of ABVP.

Comments are closed.