Students sick-food poisoning: ಮಂಗಳೂರು: ವಿಷಾಹಾರ ಸೇವನೆ 100ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: (Students sick-food poisoning) ನಗರದ ಸಿಟಿ ಆಸ್ಪತ್ರೆಗೆ ಅಧೀನದಲ್ಲಿರುವ ನರ್ಸಿಂಗ್‌ ಕಾಲೇಜಿಗೆ ಸೇರಿದ ಹಾಸ್ಟೆಲ್‌ ಒಂದರಲ್ಲಿ ವಿಷಾಹಾರ ಸೇವಿಸಿ 100ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿನಿಯರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದರೆ ಇನ್ನೂ ಕೆಲವರನ್ನು ಬೆಡ್‌ ಗಳ ಕೊರತೆಯಿಂದ ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ದಿನದಿಂದ ಕಲುಷಿತ ನೀರು ಹಾಗೂ ಆಹಾರ ಸೇವನೆ ಬಳಿಕ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೊಟ್ಟೆನೋವು, ವಾಂತಿ, ಭೇದಿ ಪ್ರಾರಂಭವಾಗಿದೆ. ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆಯ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಕೆಲವು ವಿದ್ಯಾರ್ಥಿನಿಯರು ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡದೆ ಸುಮ್ಮನಿದ್ದು, ಇತರ ವಿದ್ಯಾರ್ಥಿಗಳು ಹಾಗೂ ಪೋಷಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Sexual harassment of a boy: 16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ: ಕೇರಳದ ತೃತಿಯಲಿಂಗಿ ಮಹಿಳೆಗೆ 7 ವರ್ಷ ಜೈಲು

ಇದನ್ನೂ ಓದಿ : Govt bus-van accident: ಸರ್ಕಾರಿ ಬಸ್-ವ್ಯಾನ್ ಢಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ಇದನ್ನೂ ಓದಿ : Cow smuggling case: ಹಸು ಕಳ್ಳಸಾಗಣೆ ಪ್ರಕರಣ: 120 ಮಂದಿ ಅರೆಸ್ಟ್‌

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ” ಸೋಮವಾರ ಮುಂಜಾನೆ ಕೆಲವು ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ನಂತರ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದೆ. ಅವರನ್ನೆಲ್ಲಾ ನಗರದ ಎಜೆ, ಕೆಎಂಸಿ, ಫಾದರ್‌ ಮುಲ್ಲರ್‌ ಸೇರಿದಂತೆ ಕೆಲವು ಖಾಸಗಿ ಆಸ್ಪತ್ರೆಗೆಳಿಗೆ ದಾಖಲಿಸಲಾಗಿದೆ. ಆದರೆ ಘಟನೆಗೆ ಕಾರಣ ಏನೆಂಬುದರ ಬಗ್ಗೆ ಮಾಹಿತಿ ಇಲ್ಲ. ಶೀಘ್ರವೇ ಇದರ ಬಗ್ಗೆ ತನಿಖೆ ನಡೆಸಲಾಗುವುದು” ಎಂದಿದ್ದಾರೆ.

Students sick-food poisoning: Mangalore: More than 100 students sick due to food poisoning

Comments are closed.