ಸುಬ್ರಹ್ಮಣ್ಯ ಬಳಿ ಕಾರುಗಳ ನಡುವೆ ಭೀಕರ ಅಪಘಾತ : ಮಗು ಸೇರಿ ನಾಲ್ವರ ದುರ್ಮರಣ

ಸುಬ್ರಹ್ಮಣ್ಯ: (Subrahmanya road accident) ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಇಂದು ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದು, ತೂಫನ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತರು ಬೇಳೂರು ಮೂಲದವರು ಎಂದು ತಿಳಿದು ಬಂದಿದೆ. ಇನ್ನೂ ತೂಫನ್ ವಾಹನದಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದ್ದು, ಕ್ಷೇತ್ರ ದರ್ಶನಕ್ಕಾಗಿ ಬಂದಿರುವುದಾಗಿ ತಿಳಿದುಬಂದಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಆದರೆ ಅಪಘಾತ ಘಟನೆಗೆ ನಿಖರ ಕಾರಣಗಳೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಆದರೆ ಅಪಘಾತಕ್ಕೆ ನಿಖರ ಕಾರಣಗಳೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ : Actress Aarti Arrest : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟಿ ಅರೆಸ್ಟ್

ಇದನ್ನೂ ಓದಿ : ಸುಡಾನ್‌ ಹಿಂಸಾಚಾರದಲ್ಲಿ ಸಿಲುಕಿಕೊಂಡ ಕರ್ನಾಟಕದ 31 ಮಂದಿ

12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 2 ಮಂದಿ ಅರೆಸ್ಟ್‌

ಗಾಜಿಯಾಬಾದ್: ತನ್ನ ಸಹೋದರನ ಮೊಬೈಲ್ ಒಡೆದಿದ್ದಕ್ಕೆ ತಾಯಿ ಬಾಲಕಿಯನ್ನು ನಿಂದಿಸಿದ್ದು, ಇದರಿಂದ ಕೋಪಗೊಂಡ ಬಾಲಕಿ ಮನೆ ಬಿಟ್ಟು ಹೋಗಿದ್ದಳು. ನಂತರ ಆಕೆ ಅಂಗಡಿಯೊಂದರಲ್ಲಿ ಮೊಬೈಲ್ ರಿಪೇರಿ ಮಾಡಿಸಿ ಇ-ರಿಕ್ಷಾವನ್ನು ಹತ್ತಿದ್ದಳು. ಅದೇ ರಿಕ್ಷಾದಲ್ಲಿ ಆರೋಪಿಯೋರ್ವ ಕೂಡ ಪ್ರಯಾಣಿಸುತ್ತಿದ್ದ. ಈ ವೇಳೆ ಆರೋಪಿಯು ಬಾಲಕಿಯನ್ನು ಹೋಮ್‌ ಗಾರ್ಡ್‌ ನ ಮನೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಹೋಮ್‌ ಗಾರ್ಡ್ ಹಾಗೂ ಇನ್ನೋರ್ವ ಆರೋಪಿ ಸೇರಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಅಲ್ಲದೇ ಅತ್ಯಾಚಾರದ ವಿಚಾರವನ್ನು ಯಾರಿಗಾದರು ಬಹಿತಂಗಪಡಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಕೂಡ ಹಾಕಿದ್ದಾರೆ. ಘಟನೆಯ ಬಳಿಕ ಮನೆಗೆ ತೆರಳಿದ ಬಾಲಕಿ ತನ್ನ ತಂದೆಗೆ ಘಟನೆಯ ಬಗ್ಗೆ ವಿವರಿಸಿದ್ದು, ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : Gang rape- 2 arrested :12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 2 ಮಂದಿ ಅರೆಸ್ಟ್‌

Subrahmanya road accident: A terrible accident between cars near Subrahmanya: Four people including a child died.

Comments are closed.