Surathkal murder case: ಸುರತ್ಕಲ್ ನಲ್ಲಿ ಚಾಕು ಇರಿದು ಕೊಲೆ ಪ್ರಕರಣ : ಐವರ ಬಂಧನ

ಮಂಗಳೂರು: (Surathkal murder case) ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಯದಲ್ಲಿ ಯುವಕನೋರ್ವನಿಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದರು. ಇದೀಗ ಪರಾರಿಯಾಗಿದ್ದ ಐದು ಮಂದಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಲೀಲ್‌ (40 ವರ್ಷ) ಎಂಬಾತನನ್ನು ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ (Surathkal murder case) ಮಾಡಿದ್ದರು. ಜಲೀಲ್ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿಯಾಗಿದ್ದು ನೈತಂಗಡಿಯಲ್ಲಿ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿ ನಡೆಸುತ್ತಿದ್ದರು. ಜಲೀಲ್ ಅಂಗಡಿಯಲ್ಲಿದ್ದ ವೇಳೆಯಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಕೂಡಲೇ ಜಲೀಲ್ ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಆರೋಪಿಗಳ ವಿಚಾರಣೆ ವೇಳೆ “ಮಹಿಳೆಯೊಬ್ಬರ ಜೊತೆಗೆ ಜಲೀಲ್ ನಿಕಟ ಸಂಪರ್ಕ ಹೊಂದಿದ್ದು, ಇದು ಇಬ್ಬರ ವ್ಯಕ್ತಿಗಳ ಜೊತೆಗೆ ಮಾತಿನ ಚಕಮಕಿಗೆ ಕಾರಣವಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಜಲೀಲ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಜಲೀಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಕಾಲು ಜಾರಿ ಬಿದ್ದಿದ್ದಾನೆ. ಬಳಿಕ ಇಬ್ಬರು ಚಾಕುವಿನಿಂದ ಇರಿದು ಜಲೀಲ್ ನನ್ನು ಹತ್ಯೆ ಮಾಡಿದ್ದಾರೆ” ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್‌ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ನಾಳೆ (ಡಿಸೆಂಬರ್ 27) ಮುಂಜಾನೆ 6 ಗಂಟೆಯವರೆಗೆ ಸುರತ್ಕಲ್, ಪಣಂಬೂರು, ಕಾವೂರು, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಲ್ಲದೇ ಪರಾರಿಯಾದ ದುಷ್ಕರ್ಮಿಗಳಿಗೆ ಬಲೆ ಬೀಸಿದ್ದರು.

ಇದೀಗ ಜಲೀಲ್‌ ಎಂಬಾತನಿಗೆ ಚಾಕು ಇರಿದು ಹತ್ಯೆಗೈದು ಪರಾರಿಯಾಗಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದು, ಪೊಲೀಸರು ಐವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಲ್ಲಿ ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ : Surathkal Stab : ಸುರತ್ಕಲ್ ನಲ್ಲಿ ಯುವಕನಿಗೆ ಚಾಕು ಇರಿತ : ಕರಾವಳಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

ಇದನ್ನೂ ಓದಿ : Surathkal Section 144 : ಸುರತ್ಕಲ್ ನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ : ಸೆಕ್ಷನ್‌ 144 ಜಾರಿ

(Surathkal murder case) In Katipalya of Surathkal on the outskirts of Mangalore, a young man was stabbed and the assailants killed him and fled. Now the five absconding accused have fallen into the trap of the police and the police have succeeded in arresting the accused.

Comments are closed.