ಉಡುಪಿ : ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಹಲವುಸಿಡಿಲು ಬಡಿದು ತಂದೆ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಆತ್ರಾಡಿ ಸಮೀಪದ ಪರೀಕರದಲ್ಲಿ ನಡೆದಿದೆ.
ಪರೀಕದ ನಿವಾಸಿಗಳಾದ ಸೋಮನಾಥ ಶೆಟ್ಟಿ ಹಾಗೂ ಅವರ ಮಗ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ಇಂದು ಬೆಳಗ್ಗೆ ಮಗನೊಂದಿಗೆ ನಾಗ ದೇವರಿಗೆ ತನು ಹಾಕಲು ತೆರಳಿದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಕೂಡ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಾರೀ ಮಳೆ ಸುರಿದೆ. ಅಲ್ಲದೇ ಇನ್ನೂ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : Manipal Fire : ಪಾದರಕ್ಷೆ ಮಳಿಗೆಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ
ಇದನ್ನೂ ಓದಿ : Couple Suicide : ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್