ಮಂಗಳೂರು (kannada.newsnext.live/) : tollgate virodhi horata : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಟೋಲ್ ಗೇಟ್ ವಿವಾದ ತಾರಕಕ್ಕೇರಿದೆ. ಟೋಲ್ ಗೇಟ್ ತೆರವು ಕಾರ್ಯಾಚರಣೆ ಮಾಡಲು ಮುಂದಾದ ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಪೊಲೀಸರ ಅನುಮತಿ ಪಡೆದು ಶಾಂತಿಯುತ ಹೋರಾಟ ನಡೆಸುತ್ತಿದ್ದ ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಏಕಾಏಕಿ ಸುರತ್ಕಲ್ ಎನ್‌ಐಟಿಕೆ ಟೋಲ್ ಪ್ಲಾಝಾದಲ್ಲಿ ಟೋಲ್ ಸಿಬ್ಬಂದಿ ಕೂತಿದ್ದ ಜಾಗಕ್ಕೆ ಮುತ್ತಿಗೆ ಹಾಕಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ಏನಿದು ಸುರತ್ಕಲ್ ಟೋಲ್ ವಿವಾದ..?
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದ ಪ್ರಕಾರ ಅರವತ್ತು ಕಿಲೋಮೀಟರ್ ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ನಿರ್ಮಿಸಬಾರದು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಇಲ್ಲಿ 48 ಕಿಲೋಮೀಟರ್ ಅಂತರದಲ್ಲಿ ನಾಲ್ಕು ಟೋಲ್ಗೇಟ್ಗಳ ನಿರ್ಮಾಣವಾಗಿದೆ. ಹೀಗಾಗಿ ಸುರತ್ಕಲ್ ಟೋಲ್ ಗೇಟ್ನ್ನು ತೆರವುಗೊಳಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮವನ್ನು ಪಾಲಿಸಬೇಕು ಎನ್ನವುದು ದಕ್ಷಿಣ ಕನ್ನಡ ಜಿಲ್ಲಾ ಜನತೆಯ ಒತ್ತಾಯವಾಗಿದೆ.
ಆರು ವರ್ಷದ ಹಿಂದೆ ಸುರತ್ಕಲ್ ಟೋಲ್ ಪ್ಲಾಝಾವನ್ನು ತಾತ್ಕಾಲಿಕವಾಗಿ ನಿರ್ಮಾಣ ಮಾಡಲಾಗಿತ್ತು. ಹೆಜಮಾಡಿ ಟೋಲ್‌ಗೇಟ್ ಕಾರ್ಯನಿರ್ವಹಿಸಲು ಆರಂಭಿಸಿದ ಬಳಿಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಸುರತ್ಕಲ್ ಟೋಲ್ ಪ್ಲಾಝಾವನ್ನು ಬಂದ್ ಮಾಡಬೇಕಿತ್ತು. ಆದರೆ ತಾತ್ಕಾಲಿಕ ಎಂದು ಹೇಳಲಾದ ಸುರತ್ಕಲ್ನ ಟೋಲ್ ಪ್ಲಾಝಾವನ್ನು ಬಂದ್ ಮಾಡಿಸಿಲ್ಲ. ಇದು ಇಲ್ಲಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
ಸುರತ್ಕಲ್ ಟೋಲ್ ಪ್ಲಾಜಾವನ್ನು ಬಂದ್ ಮಾಡಬೇಕೆಂದು ಸ್ಥಳೀಯ ಶಾಸಕರು ಹಾಗೂ ಸಂಸದರಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ಈ ವೇಳೆ ಶಾಸಕರು ಹಾಗೂ ಸಂಸದರೂ ಕೂಡ ಟೋಲ್ ಬಂದ್ ಮಾಡುವ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇಂದು ಸ್ವಯಂಪ್ರೇರಿತ ಟೋಲ್ ತೆರವು ಕಾರ್ಯಕ್ಕೆ ಇಲ್ಲಿನ ಜನತೆ ಮುಂದಾಗಿದ್ದಾರೆ.
ಇದನ್ನು ಓದಿ : Diwali Bonus For Central Govt Employees : ದೀಪಾವಳಿಯ ಗಿಫ್ಟ್ : ಸರಕಾರಿ ನೌಕರರ ತುಟ್ಟಿಭತ್ಯೆ ಶೇ.38ಕ್ಕೆ ಏರಿಕೆ
ಇದನ್ನೂ ಓದಿ : Jayalalitha Death Case : ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಾವಿನಗೆ ಶಶಿಕಲಾ ಕಾರಣ : 4 ಮಂದಿ ವಿರುದ್ದ ತನಿಖೆಗೆ ಆದೇಶ
tollgate virodhi horata samithi members were taken into custody by the police