ಟಯರ್ ಸ್ಪೋಟದಿಂದ ಬಸ್ ಪಲ್ಟಿ: 10ಕ್ಕೂ ಅಧಿಕ ಮಂದಿಗೆ ಗಾಯ, ಇಬ್ಬರು ಗಂಭೀರ

ಹೊನ್ನಾವರ : ಟಯರ್ ಸ್ಪೋಟಗೊಂಡು ಚಲಿಸುತ್ತಿದ್ದ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಖರ್ವಾ ಯಲಗುಪ್ಪಾ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಹೊನ್ನಾವರ ಮಾರ್ಗವಾಗಿ ಬಸ್ ಚಲಿಸುತ್ತಿತ್ತು. ಈ ವೇಳೆಯಲ್ಲಿ ಬಸ್ ನ ಹಿಂಬದಿಯ ಟಯರ್ ಸ್ಪೋಟಗೊಂಡಿದೆ. ಇದರಿಂದಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬಸ್ಸಿನಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 10ಕ್ಕೂ ಅಧಿಕ ಮಂದಿಗೆ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

Comments are closed.