ಉಡುಪಿ : ಕೊರೊನಾ ಅಬ್ಬರ 5,800 ವಿದ್ಯಾರ್ಥಿಗಳಿಗೆ ಕ್ವಾರಂಟೈನ್

ಉಡುಪಿ : ಕೃಷ್ಣನ ನಗರಿಯಲ್ಲೀಗ ಕೊರೊನಾ ಆರ್ಭಟ‌ ಹಚ್ಚುತ್ತಿದೆ. ಅದ್ರಲ್ಲೂ ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಮಣಿಪಾಲ ವಿವಿ ಕ್ಯಾಂಪಸ್ ನ 229 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅಲ್ಲದೇ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಕೊರೊನಾ ತಪಾಸಣೆಯನ್ನೂ ಕೂಡ ಹೆಚ್ಚಳ ಮಾಡಲಾಗಿದೆ. ಕೊರೊನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿ ಇದ್ದವರಲ್ಲೇ ಸೋಂಕು ಕಾಣಿಸಿಕೊಳ್ಳುತ್ತಿದೆ.

ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ‌ ಸೋಂಕು ಕಾಣಿಸಿಕೊಳ್ಳುತ್ತಲೇ ಎಂಐಟಿ ಕ್ಯಾಂಪಸ್‌ನಲ್ಲಿ ಒಟ್ಟು 5800 ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ್ ಚಂದ್ರಸೂಡಾ ತಿಳಿಸಿದ್ದಾರೆ.

Comments are closed.