ಸೋಮವಾರ, ಏಪ್ರಿಲ್ 28, 2025
HomeCoastal NewsUdupi court sentenced 20 years : ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : 20...

Udupi court sentenced 20 years : ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -

ಉಡುಪಿ : ಅಪ್ರಾಪ್ತ ಬಾಲಕಿಯೋರ್ವಳನ್ನು ಮದುವೆ ಆಗುವುದಾಗಿ ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ (Udupi court sentenced 20 years) ವಿಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕೊಡವೂರು ನಿವಾಸಿಯಾಗಿರುವ ಕಿರಣ್‌ ( 28 ವರ್ಷ) ಎಂಬಾತನೇ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ. 16 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ಆಕೆಯನ್ನು ತಾನು ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ತನ್ನ ನೀಚ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಅಶ್ಲೀಲ ವಿಡಿಯೋ ತೋರಿಸಿ ಬ್ಲಾಕ್‌ಮೇಲ್‌ ಮಾಡಿದ್ದಾನೆ.

ನಂತರ ಆಕೆಯ ಮೇಲೆ ಎರಡದಿಂದ ಮೂರು ಬಾರಿ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಯಾರ ಬಳಿಯಲ್ಲಿಯೂ ತಿಳಿಸದಂತೆ ಬೆದರಿಕೆಯೊಡ್ಡಿದ್ದಾನೆ. ಆದ್ರೆ ನೆರೆ ಹೊರೆಯವರು ಸಂತ್ರಸ್ತ ಬಾಲಕಿಯ ಮನೆಯವರ ಗಮನಕ್ಕೆ ವಿಚಾರವನ್ನು ತಿಳಿಸಿದ್ದು, ಬಾಲಕಿಗೆ ಧೈರ್ಯ ತುಂಬಿದ್ದಾರೆ. ಘಟನೆಯ ಕುರಿತು ಉಡುಪಿಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಮದುವೆಯಾಗುವುದಾಗಿ ವಂಚನೆಗೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್‌ ಕಲಾವತಿ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡು ಉಡುಪಿಯ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 28 ಸಾಕ್ಷಿದಾರರಿಂದ ಸಾಕ್ಷಿ ಹೇಳಿಸಲಾಗಿತ್ತು. ಅಲ್ಲದೇ ಆರೋಪಿಗೆ ಈಗಾಗಲೇ ಮೊದಲೇ ಆಗಿರುವ ಸಾಕ್ಷಿ ದೊರೆತಿದ್ದು, ನ್ಯಾಯಾಲಯ ವಾದ ವಿವಾದವನ್ನು ಆಲಿಸಿ, ಅಂತಿಮವಾಗಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿದೆ.

ಆರೋಪಿ ಕಿರಣ್‌ಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂಪಾಯಿ ದಂಡ. ಇನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ 10 ವರ್ಷ ಜೈಲು ಶಿಕ್ಷೆ 10 ಸಾವಿರ ರೂಪಾಯಿ ದಂಡ, ಜೊತೆಗೆ ಬಾಲಕಿಗೆ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವರ್ಷ ಜೈಲು ಶಿಕ್ಷೆಯ ಜೊತೆಗೆ 5 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ಜೊತೆಗೆ ನೊಂದ ಬಾಲಕಿಗೆ 4 ವರ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ. ವಿಶೇಷ ಸರಕಾರಿ ಅಭಿಯೋಜಕರಾಗಿ ವೈ.ಟಿ.ರಾಘವೇಂದ್ರ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ : youth stabbed by father : ಪತ್ನಿಗೆ ಬೈದಿದ್ದಕ್ಕೆ ಕೋಪಗೊಂಡು ಮಗನಿಗೆ ಚಾಕುವಿನಿಂದ ಇರಿದ ತಂದೆ

ಇದನ್ನೂ ಓದಿ : NEET UG Exam Postpone :ನೀಟ್ ಪ್ರವೇಶ ಪರೀಕ್ಷೆ ಮುಂದೂಡಿಕೆ ? ದೆಹಲಿ ಹೈಕೋರ್ಟ್ ಇಂದು ಅರ್ಜಿಯ ವಿಚಾರಣೆ

Udupi court sentenced 20 years for sexually harassing a minor girl

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular