ಉಡುಪಿಯಲ್ಲಿ ಮುಂದುವರಿದ ಕೊರೊನಾ ಆರ್ಭಟ : 1047 ಮಂದಿಗೆ ಸೋಂಕು, 10 ಮಂದಿ ಸಾವು

ಉಡುಪಿ : ಕೊರೊನಾ ವೈರಸ್ ಸೋಂಕು ಕಳೆದೊಂದು ವಾರದಿಂದಲೂ ಉಡುಪಿ ಜಿಲ್ಲೆಯಲ್ಲಿ ಆರ್ಭಟಿಸುತ್ತಲೇ ಇದೆ. ಜಿಲ್ಲೆಯಲ್ಲಿ ಒಂದೂ ಕೂಡ 1047 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38.916ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ತಾಲೂಕಿನಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದೆ. ಇಂದು ಉಡುಪಿ ತಾಲೂಕಿನಲ್ಲಿ 645, ಕುಂದಾಪುರ ತಾಲೂಕಿನಲ್ಲಿ 347, ಕಾರ್ಕಳ ತಾಲೂಕಿನಲ್ಲಿ 45 ಪ್ರಕರಣ ದಾಖಲಾಗಿದ್ದರೆ, ಹೊರ ಜಿಲ್ಲೆಗಳಿಂದ ಉಡುಪಿಗೆ ಆಗಮಿಸಿದ್ದ 10 ಮಂದಿಗೆ ಸೋಂಕು ದೃಢಪಟ್ಟಿದೆ. ಅಲ್ಲದೇ ಉಡುಪಿ ತಾಲೂಕಿನಲ್ಲಿ 5, ಕಾರ್ಕಳ ತಾಲೂಕಿನಲ್ಲಿ 4, ಹಾಗೂ ಕುಂದಾಪುರ ತಾಲೂಕಿನಲ್ಲಿ ಓರ್ವರು ಕೊರೊನಾ ವೈರಸ್ ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲೀಗ 5,958 ಸಕ್ರೀಯ ಪ್ರಕರಣಗಳಿವೆ. ಒಟ್ಟು 2807 ಮಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 1, 047 ಮಂದಿಗೆ ಸೋಂಕು ದೃಢಪಟ್ಟಿದ್ದು, ಅತೀ ಹೆಚ್ಚು ಪ್ರಮಾಣದಲ್ಲಿ ಸೋಂಕು ದೃಢಪಡುತ್ತಿದೆ. 

Comments are closed.