ಉಡುಪಿ 1655, ದ.ಕ 1529 ಕೇಸ್ : ಕರಾವಳಿಯಲ್ಲಿ ಕೊರೊನಾ ಬ್ಲಾಸ್ಟ್

ಮಂಗಳೂರು/ ಉಡುಪಿ : ಕರಾವಳಿಯಲ್ಲಿಂದು ಕೊರೊನಾ ವೈರಸ್ ಸೋಂಕು ಮಹಾಸ್ಟೋಟ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,529 ಮಂದಿಗೆ ಸೋಂಕು ಕಾಣಿಸಿಕೊಂಡಿದ್ರೆ, ಉಡುಪಿಯಲ್ಲಿ ಬರೋಬ್ಬರಿ 1,655 ಮಂದಿಗೆ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ.

ಕಳೆದೊಂದು ತಿಂಗಳಿನಿಂದಲೂ ಕರಾವಳಿ ಭಾಗಗಳಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ. ಜನತಾ ಕರ್ಪ್ಯೂ ಜಾರಿಯಲ್ಲಿದ್ದರೂ ಕೂಡ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿಲ್ಲಾ ಅನ್ನೋದಕ್ಕೆ ಕೊರೊನಾ ಸೋಂಕಿನ ಪ್ರಕರಣಗಳೇ ಪ್ರತ್ಯಕ್ಷ ಸಾಕ್ಷಿಯಂತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಅವಿಭಜಿತ ಜಿಲ್ಲೆಯಲ್ಲಿ ಬರೋಬ್ಬರಿ 3 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರೋದು ಜನರನ್ನು ಬೆಚ್ಚಿ ಬೀಳಿಸಿದೆ.

ಉಡುಪಿ ಜಿಲ್ಲೆಯಲ್ಲಿಂದು 3 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 9331 ಸಕ್ರೀಯ ಪ್ರಕರಣಗಳಿದ್ದು, ಸೋಂಕಿತರ ಸಂಖ್ಯೆ 40,246ಕ್ಕೆ ಏರಿಕೆಯಾಗಿದ್ರೆ, 766 ಮಂದಿಯನ್ನು ಮಹಾಮಾರಿ ಬಲಿಪಡೆದಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕು ಆತಂಕವನ್ನು ಮೂಡಿಸಿದೆ. ಇದೇ ಮೊದಲ ಬಾರಿ ಉಡುಪಿಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 3986 ಸಕ್ರೀಯ ಪ್ರಕರಣಗಳಿದ್ದು, ಸೋಂಕಿತರ ಸಂಖ್ಯೆ 31,233 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ ಹೆಮ್ಮಾರಿ ಕೊರೊನಾ 206 ಮಂದಿಯನ್ನು ಬಲಿ ಪಡೆದಿದೆ.

ಕರಾವಳಿ ಭಾಗದ ಜನತೆ ಕೊರೊನಾ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಕೊರೊನಾ ಕರ್ಪ್ಯೂ ಜಾರಿಯಲ್ಲಿದ್ದರೂ ಕೂಡ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ. ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಪಾಲನೆ ಮಾಡದೇ ಇದ್ರೆ ಇನ್ನಷ್ಟು ಸಂಖ್ಯೆಯಲ್ಲಿ ಸೋಂಕು ವ್ಯಾಪಿಸೋದು ಗ್ಯಾರಂಟಿ.

Comments are closed.