Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಜಾರಿ

ಉಡುಪಿ / ಮಂಗಳೂರು : ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ ಡೌನ್‌ ಮುಂದುವರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್‌ ಹೇಳಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್‌ ತಾಂತ್ರಿಕ ಸಮಿತಿಯ ಸಭೆಯ ನಂತರದಲ್ಲಿ ಕಂದಾಯ ಸಚಿವ ಆರ್.‌ ಅಶೋಕ್‌ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇನ್ನೊಂದೆಡೆಯಲ್ಲಿ ಕೇರಳದಲ್ಲಿ ದಾಖಲೆಯ ಪ್ರಮಾಣದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಹೀಗಾಗಿ ವೀಕೆಂಡ್‌ ಲಾಕ್‌ಡೌನ್‌ ಮುಂದುವರಿಕೆ ಮಾಡಲಾಗುವುದು ಎಂದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜೊತೆಗೆ ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿಯೂ ವಿಕೇಂಡ್‌ ಲಾಕ್‌ಡೌನ್‌ ಮುಂದುವರಿಕೆ ಮಾಡಲಾಗುತ್ತದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ನೈಟ್‌ ಕರ್ಪ್ಯೂ ಕೂಡ ಮುಂದುವರಿಕೆಯಾಗಲಿದೆ. ಗಡಿಭಾಗದ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಅದ್ರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೂಲ್ಸ್‌ನ್ನು ಇನ್ನಷ್ಟು ಕಠಿಣ ಮಾಡಲಾಗುವುದು ಎಂದಿದ್ದಾರೆ.‌

ಇದನ್ನೂ ಓದಿ : Weekend Lockdown : ದ.ಕ, ಕೊಡಗು ಜಿಲ್ಲೆಯಲ್ಲಿ ಟಫ್‌ ರೂಲ್ಸ್‌ : ವೀಕೆಂಡ್‌ ಕರ್ಪ್ಯೂ ಮುಂದುವರಿಕೆ

(Corona virus hike Udupi, Dakshin Kannada weekend lockdown And Night Curfew Continue)

Comments are closed.