ಮಣಿಪಾಲ: (Udupi drug case) ಇತ್ತೀಚೆಗೆ ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ಉಡುಪಿಯ ಮಣಿಪಾಲದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಗಾಂಜಾ ಸೇವನೆ ಪ್ರಕರಣದ ಮೇರೆಗೆ ಬಂಧಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ತನಿಖೆ ಮಾಡಲಾಗುತ್ತಿದೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಠಾಣಾ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಪಿಸಿ, ಆನಂದಯ್ಯ, ಚನ್ನೇಶ ಹಾಗೂ ಅರುಣಾ ಬಾಳೇಕರ್ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಶಿವಳ್ಳಿ ಪೆರಂಪಳ್ಳಿ ರಸ್ತೆಯ ಸಾಯಿರಾಧಾ ಗ್ರೀನ್ ವ್ಯಾಲಿ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ವ್ಯಕ್ತಿಗಳು ನಿಷೇಧಿತ ಮಾದಕ ಸೇವನೆ ಮಾಡಿದ ಅನುಮಾನದ ಮೇರೆಗೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮೂವರನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೊಳಪಡಿಸಿದ್ದು, ಮೂವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಆರೋಪಿಗಳನ್ನು ಬೃಹ್ಮಗಿರಿಯ ಪೈಜಲ್ ಅಹಮ್ಮದ್ (23 ವರ್ಷ), ಕೇರಳ ಮೂಲದ ಅಂಜಲಿ ಎಸ್ ಮೆನನ್ (26 ವರ್ಷ), ಹಾಗೂ ಅನಂತನಗರ ಮಣಿಪಾಲ ನಿವಾಸಿ ಶೃತಿ ಬಂಗೇರ (24 ವರ್ಷ) ಎಂದು ಗುರುತಿಸಲಾಗಿದೆ. ಇದೀಗ ಮೂವರನ್ನು ಮಣಿಪಾಲ ಪೊಲೀಸ್ ಠಾಣಾ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : Couples hanged to death: ಮಂಗಳೂರಿನ ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ
ಇದನ್ನೂ ಓದಿ : Drug case- three arrested: ಕುಂದಾಪುರ: ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣ: ಮೂವರು ಪೊಲೀಸರ ವಶಕ್ಕೆ
ಇದನ್ನೂ ಓದಿ : College lecturer committed suicide: ಮಂಗಳೂರು : ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Udupi drug case: Udupi: Ganja consumption case, three arrested including two women