Udupi : ಗೋ ರಕ್ಷಕರ ಹತ್ಯೆ ಯತ್ನ ಪ್ರಕರಣ : ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಉಡುಪಿ (Udupi) : ಗೋ ಸಾಗಾಟ ಮಾಡುತ್ತಿದ್ದುದನ್ನು ತಡೆಯಲು ಮುಂದಾಗಿದ್ದ ಗೋ ರಕ್ಷಕರ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಾಳೂರಿನಲ್ಲಿ ವಾಹನ ಹತ್ತಿಸಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಗಾಯಗೊಂಡಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಚಾರಿಸಿದ್ದಾರೆ.

ಗೋ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯನ್ನು ಪಡೆದಿದ್ದ ಗೋ ರಕ್ಷಕರ ತಂಡ ಗೋವುಗಳನ್ನು ತುಂಬಿಸಿಕೊಂಡು ಸಾಗುತ್ತಿದ್ದ ಟೆಂಪೋವನ್ನು ತಡೆಯಲು ಮುಂದಾಗಿತ್ತು. ಈ ವೇಳೆಯಲ್ಲಿ ದುಷ್ಕರ್ಮಿಗಳು ಗೋ ರಕ್ಷಕರ ಮೇಲೆ ಟೆಂಪೋ ಹತ್ತಿಸಲು ಯತ್ನಿಸಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ಗೃಹ ಸಚಿವರು ವೈದ್ಯರ ಜೊತೆಗೆ ಸಮಾಲೋಚನೆಯನ್ನು ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸ್‌ ಇಲಾಖೆ ಕಠಿಣ ಕ್ರಮಕೈಗೊಳ್ಳುವಂತೆ ಗೋ ರಕ್ಷಕರು ಆಗ್ರಹಿಸುತ್ತಿದ್ದಾರೆ.

ನಡೆದಿದ್ದೇನು ?

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮೇಳೆಗೆ ಸಮೀಪದ ಮಾಳೂರಿನಲ್ಲಿ ಗೋಕಳ್ಳರು ಗೋವುಗಳನ್ನು ಪಿಕ್‌ಅಪ್‌ ವಾಹನದಲ್ಲಿ ತುಂಬಿಸಿಕೊಂಡು ಎಸ್ಕೇಪ್‌ ಆಗುತ್ತಿದ್ದರು. ಈ ವೇಳೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಬಂದಿದ್ದ ಕಿರಣ್‌ ಹಾಗೂ ಚರಣ್‌ ಎಂಬ ಸಹೋದರರ ಮೇಲೆ ಪಿಕ್‌ ಅಪ್‌ ವಾಹನ ಹತ್ತಿಸಿದ್ದಾರೆ. ಇದರಿಂದಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ಗೋ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿ, ವಾಹನವನ್ನು ಜಖಂ ಮಾಡಿದ್ದರು. ಅಲ್ಲದೇ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : Fortuner – KSRCT BUS ನಡುವೆ ಭೀಕರ ಅಪಘಾತ : ನಾಲ್ವರು ದುರ್ಮರಣ

ಇದನ್ನೂ ಓದಿ : ಸಿನಿಮಾದಲ್ಲಿ ನಟಿಸುವ ಆಮಿಷ : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

Udupi : Home Minister Araga Jnanendra inquires about the health of Cow Protectors at Hospital

Comments are closed.