ಉಡುಪಿ : ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಶಾಸಕ ರಘಪತಿ ಭಟ್ ಅವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ದಿನದಿಂದಲೂ ಸಕ್ರೀಯರಾಗಿ ಕ್ಷೇತ್ರದಾದ್ಯಂತ ತಿರುಗಾಟವನ್ನು ನಡೆಸುತ್ತಿದ್ದ ಉಡುಪಿ ಶಾಸಕ ರಘಪತಿ ಭಟ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವೈದ್ಯರ ಸಲಹೆಯ ಮೇರೆಗೆ ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದಲೂ ತನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೊನಾ ತಪಾಸಣೆಯನ್ನು ಮಾಡಿಸಿಕೊಂಡು ಕ್ವಾರಂಟೈನ್ ಗೆ ಒಳಗಾಗಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಹಲವರಿಗೆ ಆತಂಕ ಶುರುವಾಗಿದೆ.