Kundapur : ಅನಧಿಕೃತ ಮೂಕಾಂಬಿಕಾ ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ

ಕುಂದಾಪುರ : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್‌ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಂಟ್ವಾಡಿಯಲ್ಲಿ ನಡೆದಿದಿದೆ.

ಮೂಕಾಂಬಿಕಾ ಕ್ಲಿನಿಕ್‌ ಹಲವು ವರ್ಷಗಳಿಂದಲೂ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿತ್ತು. ಉಡುಪಿ ಜಿಲ್ಲಾ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಾಧಿಕಾರದ ಸೂಚನೆಯ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಅವರ ನೇತೃತ್ವದಲ್ಲಿ ಬಿಗ ಹಾಕಲಾಗಿದೆ.

ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್‌ ಬಗ್ಗೆ ಸಾಕಷ್ಟು ದೂರುಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮತ್ತು ಕೆಪಿಎಂಇ ನೋಡಲ್‌ ಅಧಿಕಾರಿ ಡಾ. ರಾಮ್‌ ರಾವ್‌ ಕೆ., ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರತಾಪ್‌, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಶೋಕ್‌ ಹಾಗೂ ಕೆಪಿಎಂಇ ವಿಷಯ ನಿರ್ವಾಹಕ ಸುಬ್ರಹ್ಮಣ್ಯ ಸೇರಿಗಾರ್‌ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ : ಮಂಗಳೂರು : ಮದ್ಯಪಾನಕ್ಕೆ ಹಣ ನಿರಾಕರಿಸಿದ್ದಕ್ಕೆ ಸ್ನೇಹಿತನ ಹತ್ಯೆ : 7 ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಇದನ್ನೂ ಓದಿ : ಮಲ್ಪೆ : ಮೀನು ಲಾರಿ ಚಾಲಕನ ಅಪಹರಣ : 15 ಲಕ್ಷ ರೂಪಾಯಿಗೆ ಬೇಡಿಕೆ

( An unauthorized private clinic has been locked up by health department officials in Kundapur )

Comments are closed.