Student Suicide :ಕೊಲ್ಲೂರು : ಬಿಕಾಂ ಪದವಿ ವಿದ್ಯಾರ್ಥಿ ನೇಣಿಗೆ ಶರಣು

ಕೊಲ್ಲೂರು : ಖಾಸಗಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆಯುತ್ತಿದ್ದ ವಿದ್ಯಾರ್ಥಿಯೋವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಾವಡಿ ಎಂಬಲ್ಲಿ ನಡೆದಿದೆ.

ಸುಪ್ರೀತ ( 22 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಪಡೆಯುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ಹೊತ್ತಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪರೀಕ್ಷೆಯ ಕುರಿತು ವಿಪರೀತ ಭಯವಿದ್ದು, ಕೆಲವು ಸಮಯಗಳಿಂದಲೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ. ಈ ಕುರಿತು ಮೃತ ವಿದ್ಯಾರ್ಥಿಯ ತಂಡ ಚಂದ್ರ ನಾಯ್ಕ ಅವರು ಕೊಲ್ಲೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಆತ್ಮ ಬಿಡಿಸುವ ನೆಪದಲ್ಲಿ ಅತ್ಯಾಚಾರ: 16 ಬಾಲಕಿ ಮೇಲೆ ದೌರ್ಜನ್ಯ ನಡೆಸಿದ ಬಾಬಾ

ಇದನ್ನೂ ಓದಿ : ಆಶ್ರಿತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ : ತಾಯಿ, ಮಗಳು ಸಜೀವ ದಹನ

(B.Com Student suprith Suicide Kolluru near Udupi district )

Comments are closed.