ಭಾನುವಾರ, ಏಪ್ರಿಲ್ 27, 2025
HomeCoastal NewsUdupi News : ಜೂನ್ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

Udupi News : ಜೂನ್ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

- Advertisement -

ಉಡುಪಿ : (Udupi News) ಲೋಕಾಯುಕ್ತರ ಜನ ಸಂಪರ್ಕ ಸಭೆ ಜೂನ್ 14ರಂದು ನಡೆಯಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜನ ಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಜೂನ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಕಾರ್ಕಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಜನಸಂಪರ್ಕ ಸಭೆ ಮಾತ್ರವಲ್ಲದೇ ಉಳಿದ ದಿನಗಳಂದು ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿದವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೆಪಾಸಿಟಿ ಬಿಲ್ಡಿಂಗ್ ಪ್ರೋಗ್ರಾಮ್ : ಕಾರ್ಯಾಗಾರ

ಉಡುಪಿ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕುರಿತು ಡಿ.ಜಿ.ಎಫ್.ಟಿ ಬೆಂಗಳೂರು, ವಿ.ಟಿ.ಪಿ.ಸಿ ಬೆಂಗಳೂರು, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಹಾಗೂ ಉಡುಪಿಯ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ರವರ ಸಹಯೋಗದೊಂದಿಗೆ ಕೆಪಾಸಿಟಿ ಬಿಲ್ಡಿಂಗ್ ಪ್ರೋಗ್ರಾಮ್ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ : ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯ ವರ್ತನೆ : ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

ಕಾರ್ಯಾಗಾರದಲ್ಲಿ ಉಡುಪಿ ಜಿಲ್ಲೆಯಲ್ಲಿ ರಫ್ತು ಅವಕಾಶಗಳು, ಸವಾಲುಗಳು ಹಾಗೂ ರಫ್ತು ಚಟುವಟಿಕೆಯನ್ನು ಪ್ರಾರಂಭಿಸಲು ಇರುವ ನಿಯಮಾವಳಿಗಳು ಹಾಗೂ ಮುಂತಾದ ವಿಷಯಗಳ ಕುರಿತು ಉದ್ದಿಮೆದಾರರಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುವುದು. ಆಸಕ್ತರು ಜೂನ್ 20 ರ ಒಳಗೆ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ಮೊ.ನಂ: 9448623952 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Udupi News : Lokayukta People’s Contact Meeting on 14th June

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular