ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ವಿದ್ಯಾರ್ಥಿನಿ ನಿಖಿತಾ ಕುಲಾಲ್ (Nikitha kulal) ಅನುಮಾನಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಉಡುಪಿಯ ಸಿಟಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದ್ದು, ಸಾವಿನ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಸ್ಪತ್ರೆಯ ಮುತ್ತಿಗೆಗೆ ಮುಂದಾದ ಘಟನೆ ನಡೆಸಿದೆ.
ವಿದ್ಯಾರ್ಥಿನಿ ನಿಖಿತಾ ಕುಲಾಲ್‌ಗೆ ಜೂನ್ 13ರಂದು ವಾಂತಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಸ್ವಸ್ಥಗೊಂಡ ಆಕೆಯನ್ನು ಪೋಷಕರು ಜೂನ್ 14 ರಂದು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಖಿತಾ ಸಾವನ್ನಪ್ಪಿದ್ದರು. ಇದೀಗ ವಿದ್ಯಾರ್ಥಿನಿಯ ಸಾವಿಗೆ ವೈದ್ಯರೇ ಕಾರಣ ಎಂದು ಪೋಷಕರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿತಾ ಕುಲಾಲ್ ಸಾವಿನ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಇದನ್ನೂ ಓದಿ : Child Protection Committee meeting : ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಡಾ. ತಿಪ್ಪೇಸ್ವಾಮಿ
ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆಯಲ್ಲಿ ಪೊಲೀಸರು ವಿದ್ಯಾರ್ಥಿಗಳು ತಡೆಯೊಡ್ಡಿದ್ದಾರೆ. ಈ ವೇಳೆಯಲ್ಲಿ ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಸಿದೆ. ನಿಖಿತಾ ಕುಲಾಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ನಡೆಸಿ ತಪ್ಪತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

udupi News Student Nikitha kulal Suspected Death ABVP Protest In City Hospital Udupi