Udupi : ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷ ರಾಜಾರಾಮ್‌ ನಾಪತ್ತೆ

ಕೋಟ : ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷರಾಗಿರುವ ರಾಜಾರಾಂ ಅವರು ನಾಪತ್ತೆಯಾಗಿದ್ದಾರೆ. ಈ ಕುರಿತು ಅವರ ಪತ್ನಿ ಸುನಿತಾ ರಾಜಾರಾಂ ಅವರು ಕೋಟ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

ಸಪ್ಟೆಂಬರ್‌ 24 ರಂದು ಸಂಜೆ 5.30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ರಾತ್ರಿ ಕಳೆದರೂ ಮನೆಗೆ ವಾಪಾಸ್ಸು ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದರೂ ಅವರ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಐದು ತಿಂಗಳ ಹಿಂದೆ ರಾಜಾರಾಂ ಅವರು ಯಾರಿಗೂ ಹೇಳದೆ ಮನೆಯಿಂದ ಹೋದವರು ಒಂದು ತಿಂಗಳ ಬಳಿಕ ಮರಳಿ ಮನೆಗೆ ಬಂದಿದ್ದರು. ಆದ್ರೆ ಕಳೆದ ಒಂಬತ್ತು ದಿನಗಳಿಂದಲೂ ಅವರ ಸುಳಿವು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದು, ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಶಿಕ್ಷಕಿ ಉಷಾ ಸಾವು : ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರೋಶ

ಇದನ್ನೂ ಓದಿ : ಮಂಗಳೂರು : ಶಾಲಾ ಬಾಲಕಿ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

( Udupi taluk panchayat vice president Rajaram missing )

Comments are closed.