ಭಾನುವಾರ, ಏಪ್ರಿಲ್ 27, 2025
HomeCoastal NewsUdupi News : ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗೆ ನಿಗದಿತ ಅವಧಿಯೊಳಗೆ ಪರಿಹಾರ

Udupi News : ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗೆ ನಿಗದಿತ ಅವಧಿಯೊಳಗೆ ಪರಿಹಾರ

- Advertisement -

ಉಡುಪಿ : ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ (Udupi News) ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ಕಳೆದ ಜನವರಿ 16ರಿಂದ ಸಂತಕಟ್ಟೆ ಅಂಡರ್‌ ಪಾಸ್‌ ಕಾಮಗಾರಿಯು ಪ್ರಾರಂಭಗೊಂಡಿದ್ದು, ಮಂದಗತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಳೆದ ತಿಂಗಳ ಮಳೆರಾಯನ ಆರ್ಭಟದಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್‌ ರಸ್ತೆಗೆ ಹಾನಿಯಾಗಿದ್ದಲ್ಲದೇ, ಮಣ್ಣು ಅಂಡರ್‌ಪಾಸ್‌ನ ತಡೆಗೋಡೆ ಮೇಲೆ ಕೂಡ ಬಿದ್ದಿರುವುದರಿಂದ ಕಾಮಗಾರಿಗೆ ತೊಡಕಾಗಿದೆ. ಸದ್ಯ ಉಡುಪಿ ಸಂತಕಟ್ಟೆ ಸರ್ವಿಸ್‌ ರಸ್ತೆ ಕುಸಿಯುತ್ತಿರುವ ವಾಹನದಲ್ಲಿ ಸಂಚರಿಸುವವರು ಆತಂಕಕ್ಕೆ ಒಳಾಗಿದ್ದರು.

ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್‌ ಅತ್ಯಂತ ವಾಹನ ದಟ್ಟಣೆಯಿಂದ ಕೂಡಿದ್ದು, ಪ್ರತಿ ದಿನ 4500 ಕ್ಕೂ ಹೆಚ್ಚು ವಾಹನಗಳು ಇಲ್ಲಿ ಸಂಚರಿಸುತ್ತವೆ. ಇದು ಪ್ರಮುಖ ಬ್ಲಾಕ್‌ ಸ್ಪಾಟ್ ಆಗಿ ಗುರುತಿಸಲಾಗಿದೆ. ಈ ಭಾಗದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಓವರ್‌ ಪಾಸ್‌ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಹಲವು ವರ್ಷಗಳಿಂದ ಇದು ಸಾರ್ವಜನಿಕರ ಪ್ರಮುಖ ಬೇಡಿಕೆ ಆಗಿತ್ತು. ಆದರೆ ಇದೀಗ ಇಲ್ಲಿ ಸಂಚರಿಸುವ ಜನರಿಗೆ ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ಇದನ್ನೂ ಓದಿ : Dr. K. Vidyakumari : ಮಕ್ಕಳಿಗೆ ಸಕಾಲದಲ್ಲಿ ಲಸಿಕೆ ಕೊಡಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ ಅಳವಡಿಕೆ ಈ ಎಲ್ಲಾ ಸಮಸ್ಯೆಗಳ ಕುರಿತಂತೆ ಆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು ಮತ್ತು ಸಂಬಂಧಪಟ್ಟ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಹೇಳಿದರು.

Udupi News : Udupi : Solution to National Highway problem within stipulated time

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular