ಸೋಮವಾರ, ಏಪ್ರಿಲ್ 28, 2025
HomeCoastal NewsUdupi power cut : ಉಡುಪಿ ಜಿಲ್ಲೆಯಲ್ಲಿ ಜೂನ್ 26 ರಿಂದ 28ರ ವರೆಗೆ ವಿದ್ಯುತ್...

Udupi power cut : ಉಡುಪಿ ಜಿಲ್ಲೆಯಲ್ಲಿ ಜೂನ್ 26 ರಿಂದ 28ರ ವರೆಗೆ ವಿದ್ಯುತ್ ವ್ಯತ್ಯಯ

- Advertisement -

ಉಡುಪಿ : (Udupi power cut) ತಾಂತ್ರಿಕ ನಿರ್ವಹಣೆಯ ಹಿನ್ನೆಲೆಯಲ್ಲಿ ಜೂನ್‌ 26 ರಿಂದ 28ರ ವರೆಗೆ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯನ್ನು ಹೊರಡಿಸಿದೆ. ಯಾವೆಲ್ಲಾ ಸ್ಥಳಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.

ಉದ್ಯಾವರ ಎಂ.ಯು.ಎಸ್‌.ಎಸ್‌ನಿಂದ ಹೊರಡುವ ಪಿತ್ರೋಡಿ ಹಾಗೂ ಪಿತ್ರೋಡಿ ಇಂಡಸ್ಟ್ರೀಯಲ್‌ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂಕುದ್ರು, ಗೋವಿಂದಗುಡ್ಡೆ, ಪಿತ್ರೋಡಿ, ಮುದ್ದಲಗುಡ್ಡೆ, ಪಿತ್ರೋಡಿ ಇಂಡಸ್ಟ್ರೀಯಲ್‌ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂ. 26 ರಂದು ಬೆಳಗ್ಗೆ 9.30 ರಿಂದ ಸಂಜೆ 5.30ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಉಡುಪಿ-ಫೀಡರ್‌ ಮಾರ್ಗದಲ್ಲಿ ನಿರ್ವಹಣೆ ಕೆಲಸ ಇರುವುದರಿಂದ ಮಾರುತಿ ವಿಥೀಕಾ, ತೆಂಕಪೇಟೆ, ಕೆ.ಎಂ.ಮಾರ್ಗ, ಕನಕದಾಸ ರಸ್ತೆ, ನ್ಯೂ ಸಿಟಿ ಆಸ್ಪತ್ರೆ, ಹಳೆ ಕೆ.ಎಸ್‌.ಆರ್‌.ಟಿ.ಸಿ ಬಸ್‌ ಸ್ಟ್ಯಾಂಡ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್‌ 27 ರಂದು ಬೆಳಗ್ಗೆ 9.30 ರಿಂದ ಸಂಜೆ 5.30ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

110/33/11 ಕೆ.ವಿ. ಮಣಿಪಾಲ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಇಂದ್ರಾಳಿ ಫೀಡರಿನಲ್ಲಿ ಹಾಗೂ 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಚಿಟ್ಟಾಡಿ ಮತ್ತು ಉದ್ಯಾವರ-1 ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವಿದರಿಂದ ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ಇಂದಿರಾನಗರ, ಕಸ್ತೂರ್ಬಾ ನಗರ, ಕುಕ್ಕಿಕಟ್ಟೆ, ಪದ್ಮನಾಭನಗರ, ಚಿಟ್ಟಾಡಿ, ಹನುಮಾನ್‌ ಗ್ಯಾರೇಜ್‌, ಅಮ್ಮಣ್ಣಿ ರಾಮಣ್ಣ ಹಾಲ್‌ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಜೂನ್‌ 27 ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

110/11 ಕೆ.ವಿ ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ಪ್ರೆಸ್‌ ಫೀಡರಿನಲ್ಲಿ, 220/110/11 ಕೆ.ವಿ. ಹೆಗ್ಗುಂಜೆ ವಿದ್ಯುತ್‌ ಸ್ವೀಕರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಹೆಗ್ಗುಂಜೆ ಫೀಡರ್‌ ಮಾರ್ಗದಲ್ಲಿ ಮತ್ತು 110/11 ಕೆ.ವಿ ನಿಟ್ಟೂರು ಉಪ ವಿದ್ಯುತ್‌ ಕೇಂದ್ರದಿಂದ ಹೊರಡುವ 11 ಕೆ.ವಿ ಶಾಂತಿವನ ಫೀಡರ್‌ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವಿದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಗೋಪಾಲಪುರ, ಶಾಂತಿವನ, ಬಡಾನಿಡಿಯೂರು, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್‌ 27 ರಂದು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

110/11 ಕೆ.ವಿ ಹಾಲಾಡಿ ವಿದ್ಯುತ್‌ ಉಪಕೇಂದ್ರದಲ್ಲಿ 110 ಕೆ.ವಿ ಬಸ್‌ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ 110/11 ಕೆ.ವಿ ಹಾಲಾಡಿ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್‌ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ, ವಾರಾಹಿ ಮತ್ತು ಕೆ.ಎನ್.ಎನ್.ಎಲ್‌ ಹಾಲಾಡಿ ಮಾರ್ಗಗಳಲ್ಲಿ ಅಮಾಸೆಬೈಲು, ಕಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ತೊಂಬಟ್ಟು, ಕೆಳಸುಂಕ, ಜಡ್ಡಿನಗದ್ದೆ, ಹಾಲಾಡಿ, ಬಿದ್ಕಲ್‌ಕಟ್ಟೆ, ಗಾವಳಿ, ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಸಿದ್ದಾಪುರ, ಉಳ್ಳೂರು-74, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೈಲೂರು, ಕೊಂಡಳ್ಳಿ, ಬೆದ್ರಾಡಿ, ಕೋಣಿಹರ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗಹಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್‌ 27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ಗಂಟೆಯವರಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು ಎಂದು ತಿಳಿಸಿದೆ.

110/33/11 ಕೆ.ವಿ ಮಣಿಪಾಲ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆ.ಎಂ.ಎಫ್‌ ಫೀಡರಿನಲ್ಲಿ ನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೆಬೆಟ್ಟಿ, ಅರ್ಬಿ, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್‌ 28 ರಂದು ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಉದ್ಯಾವರ ಎಂ.ಯು.ಎಸ್‌.ಎಸ್‌ ನಿಂದ ಹೊರಡುವ ಸಂಪಿಗೆನಗರ ಮತ್ತು ಕಡೆಕಾರ್‌ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸಾಲ್ಮರ, ಕಲಾಯಿಬೈಲು, ಸಂಪಿಗೆನಗರ, ಕುತ್ಪಾಡಿ, ಅನಂತಕೃಷ್ಣ ನಗರ, ಕಡೆಕಾರ್‌, ಕಿದಿಯೂರು, ಪಡುಕೆರೆ, ಕನ್ನರ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್‌ 28 ರಂದು ಬೆಳಗ್ಗೆ 9.30 ರಿಂದ ಸಂಜೆ 5.30ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : Heavy rain in coastal Karnataka : ಕರಾವಳಿಯಲ್ಲಿ 2 ದಿನ ಭಾರೀ ಮಳೆ : ಆರೆಂಜ್ ಅಲರ್ಟ್ ಘೋಷಣೆ

33/11 ಕೆ.ವಿ ಹೆಬ್ರಿ ಉಪವಿದ್ಯುತ್‌ ಸ್ಥಾವರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11 ಕೆ.ವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, ಸಂತಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸೂರು, ಬಚ್ಚಾಪ್ಪು, ಹೆಬ್ರಿ, ಕಲ್ಲಿಲ್ಲು ವಾಟರ್‌ ಸಪ್ಲೈ, ಹುಟ್ಟುರ್ಕೆ ವಾಟರ್‌ ಸಪ್ಲೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್‌ 28 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Udupi power cut: Power cut in Udupi district from June 26 to 28

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular