ಭಾನುವಾರ, ಏಪ್ರಿಲ್ 27, 2025
HomeCoastal NewsUdupi School College holiday : ಭಾರೀ ಮಳೆ, ಉಡುಪಿ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ಜುಲೈ 26...

Udupi School College holiday : ಭಾರೀ ಮಳೆ, ಉಡುಪಿ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ಜುಲೈ 26 ರಜೆ ಘೋಷಣೆ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

- Advertisement -

ಉಡುಪಿ : ಪುಷ್ಯಾ ಮಳೆಯ ಆರ್ಭಟಕ್ಕೆ ಕೃಷ್ಣನಗರಿ ಉಡುಪಿ ತತ್ತರಿಸಿ ಹೋಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ( Udupi School College holiday) ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಕಳೆದ ಎರಡು ದಿನಗಳಿಂದಲೂ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಉಡುಪಿ ತಾಲೂಕುಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರ ವರೆಗೆ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಜಿಲ್ಲೆಯ ಜೀವನದಿಗಳು ತುಂಬಿ ಹರಿಯುತ್ತಿರುವುದರಿಂದಾಗಿ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಆವರಿಸಿದೆ. ಬಹುತೇಕ ಕಡೆಗಳಲ್ಲಿ ಮರಗಳು ಉರುಳಿಬಿದ್ದಿದ್ದು, ಮನೆಗಳಿಗೆ ಹಾನಿಯಾಗಿದೆ. ಇನ್ನು ಕಾಪು ಸಮೀಪದ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿಯಲ್ಲಿ ಬಾರೀ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಹಿನ್ನೆಲೆಯಲ್ಲಿ ವಿದ್ಯುತ್‌ ಕಂಬಗಳು ತುಂಡಾಗಿವೆ. ಇದರಿಂದಾಗಿ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ.

ಇದನ್ನೂ ಓದಿ : Udupi News : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ : ಎಸ್ಪಿ ಸ್ಪಷ್ಟನೆ

ಇದನ್ನೂ ಓದಿ : Dr. K. Vidyakumari : ಉಡುಪಿ : ಬೀಚ್, ಜಲಪಾತಗಳಲ್ಲಿ ಸೆಲ್ಪಿ ನಿಷೇಧ : ಡಿಸಿ ಡಾ.ಕೆ. ವಿದ್ಯಾಕುಮಾರಿ

ಬೈಂದೂರು ತಾಲೂಕಿನಲ್ಲಿ ಸೌಪರ್ಕಿಣಕಾ ನದಿ ಹಾಗೂ ಬ್ರಹ್ಮಕುಂಡ ನದಿ ತುಂಬಿ ಹರಿಯುತ್ತಿದೆ. ಹೊಸಾಡು, ಚಿಕ್ಕಳಿ, ನಾಡ, ಮಾರಣಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದೆ. ವಾರಾಹಿ ನದಿ ತುಂಬಿ ಹರಿಯುತ್ತಿದ್ದು, ಹಾಲಾಡಿ, ಬಲಾಡಿ, ಹಳ್ನಾಡು, ಕಂಡ್ಲೂರು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ. ಮಂಗಳವಾರ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.

School College Holiday: Heavy rains, holiday announced for schools and colleges of Udupi district on July 26: District Collector Dr.K Vidyakumari

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular